ಪರಿಸರ ದೃಷ್ಟಿಯಿಂದ ಜನಸಂಖ್ಯೆ ನಿಯಂತ್ರಣವಾಗಲಿ: ಸಿಎಂ ಸಿದ್ದರಾಮಯ್ಯ

KSPCB cm siddaramaiah
Published on

ಬೆಂಗಳೂರು: ಭಾರತವು ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿ ವಿಶ್ವದಲ್ಲಿಯೇ ಮೊದಲನೇ ಸ್ಥಾನದಲ್ಲಿದೆ. ಜನಸಂಖ್ಯೆ ಜಾಸ್ತಿಯಾದಷ್ಟು ಪ್ರಕೃತಿ ಮೇಲೆ ಪರಿಣಾಮ ಬೀರಲಿದೆ. ಜನಸಂಖ್ಯೆ ನಿಯಂತ್ರಣದ ಜತೆಗೆ ಪರಿಸರ ಜಾಗೃತಿ ಕೂಡ ಮುಖ್ಯ ಎಂದ ಸಿಎಂ ಸಿದ್ದರಾಮಯ್ಯ ಹೇಳಿದರು.

ಅರಣ್ಯ ಇಲಾಖೆ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ಅರಮನೆ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ ‘ವಿಶ್ವ ಪರಿಸರ ದಿನಾಚರಣೆ-2025’ ಉದ್ಘಾಟಿಸಿ ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ 1.44 ಕೋಟಿ ಜನಸಂಖ್ಯೆ ಇದೆ. 900 ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಭವಿಷ್ಯದಲ್ಲಿ ಕರ್ನಾಟಕ ಮರುಭೂಮಿಯಾಗಲಿದೆ. ಆದ್ದರಿಂದ ಈಗಲೇ ಎಚ್ಚೆತ್ತುಕೊಳ್ಳಬೇಕಿದೆ ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಪರಿಸರ ಉಳಿಸುವ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾ ಈಶ್ವರ್ ಖಂಡ್ರೆ, ಬೈರತಿ ಸುರೇಶ್, ಡಾ. ಎಂ.ಸಿ. ಸುಧಾಕರ್ ಸೇರಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net