ಜನಸಂಖ್ಯಾ ಸ್ಥಿರತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ

CTD JNASAMNKE----
Published on

ಚಿತ್ರದುರ್ಗ: ಭಾರತ ಅತಿ ಹೆಚ್ಚು ಜನಸಂಖ್ಯೆ ಹೊಂದುತ್ತಿರುವ ದೇಶವಾಗಿ ಬೆಳೆಯುತ್ತಿದೆ. ಅಭಿವೃದ್ಧಿ ದೃಷ್ಟಿಯಿಂದ ಜನಸಂಖ್ಯೆ ಸ್ಥಿರತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಡಿಎಚ್‌ಒ ಡಾ.ಜಿ.ಪಿ. ರೇಣುಪ್ರಸಾದ್ ಹೇಳಿದರು.

ಬುದ್ದನಗರದ ಆರೋಗ್ಯ ಕೇಂದ್ರದ ಆವರಣದಲ್ಲಿ ಶುಕ್ರವಾರ ಡಿಎಚ್‌ಒ ಡಾ.ಜಿ.ಪಿ. ರೇಣುಪ್ರಸಾದ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಜನಸಂಖ್ಯೆ ಹೆಚ್ಚಳದ ಅನಾಹುತಗಳ ಬಗ್ಗೆ ಎಚ್ಚರಿಕೆ ನೀಡಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಖಾ ಮಾತನಾಡಿ, ಕರ್ನಾಟಕದಲ್ಲಿ ಫಲವತ್ತತೆ ದರ 1.7 ಇದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ 1.8 ಇದೆ. ಅಂದರೆ ಕುಟುಂಬದಲ್ಲಿ ಎರಡಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿದ್ದು, ಜನಸಂಖ್ಯೆಯ ಸ್ಥಿರತೆ ಕಾಪಾಡಿಕೊಳ್ಳುವಂತೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಅಭಿನವ್, ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ. ಗಿರೀಶ್ ಮಾತನಾಡಿದರು.

ಬುದ್ಧನಗರ ಆರೋಗ್ಯ ಕೇಂದ್ರದ ಬಳಿ ಡಿಎಚ್‌ಒ ಹಾಗೂ ನಗರಸಭೆ ಸದಸ್ಯೆ ಶ್ರೀದೇವಿ ಚಕ್ರವರ್ತಿ ಜಾಥಾಕ್ಕೆ ಚಾಲನೆ ನೀಡಿದರು. ಪರಿಸರ ಬಿಲ್ಡಿಂಗ್ ಮುಖಾಂತರ ಪ್ರಶಾಂತ್ ನಗರ, ಜೋಗಿಮಟ್ಟಿ ರಸ್ತೆ 5ನೇ ಕ್ರಾಸ್‌ನಿಂದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಜಾಥಾ ಸಮಾಪನಗೊಂಡಿತು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ. ಮೂಗಪ್ಪ, ಬಿ. ಜಾನಕಿ, ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ.ಎನ್. ಕಾಶಿ, ಡಾ.ನಾಗರಾಜ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ, ವೈದ್ಯಾಧಿಕಾರಿಗಳಾದ ಡಾ. ಸುರೇಂದ್ರ, ಡಾ. ಅಕ್ಷತಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್‌ಮೂರ್ತಿ, ಪ್ರವೀಣ್ ಕುಮಾರ್, ಸಿರೀಶ್, ರುದ್ರಮುನಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net