

ಕೊಳ್ಳೇಗಾಲ: ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶನಿವಾರ ಸುತ್ತೂರಿನ ಶಿವರಾತ್ರಿ ಡಾ.ಶ್ರೀ ರಾಜೇಂದ್ರ ಮಹಾಸ್ವಾಮಿ ಅವರ ಭಾವಚಿತ್ರ ಮೆರವಣಿಗೆ ಶನಿವಾರ ಶ್ರದ್ಧಾ-ಭಕ್ತಿಯಿಂದ ನೆರವೇರಿತು.
ಪಟ್ಟಣದ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಶ್ರೀ ರಾಜೇಂದ್ರ ಮಹಾಸ್ವಾಮಿ ಅವರ ಭಾವಚಿತ್ರ ಮೆರವಣಿಗೆಗೆ ಮುಡಿಗುಂಡ ವಿರಕ್ತ ಮಠದ ಶ್ರೀಕಂಠ ಸ್ವಾಮೀಜಿ ಹಾಗೂ ವಿವಿಧ ಮಠಗಳ ಹರಗುರು ಚರಮೂರ್ತಿಗಳು ರಥಕ್ಕೆ ಚಾಲನೆ ನೀಡಿದರು. ಮೆರವಣಿಗೆ ಪಟ್ಟಣದ ಅಂಬೇಡ್ಕರ್ ರಸ್ತೆಯಲ್ಲಿ ಮೂಲಕ ಪ್ರಮುಖ ರಸ್ತೆಗಳಲ್ಲಿ ಸಾಗಿತು. ವೀರಗಾಸೆ ಕುಣಿತ, ಡೊಳ್ಳು ಕುಣಿತ, ನಂದಿ ಧ್ವಜ ಕುಣಿತ ಮತ್ತು ಇನ್ನಿತರ ಕಲಾತಂಡಗಳು ಮೆರವಣಿಗೆಯ ಮೆರುಗು ಹೆಚ್ಚಿಸಿತು.
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಹನೂರು ಶಾಸಕ ಎಂ.ಆರ್.ಮಂಜುನಾಥ್, ಮಾಜಿ ಶಾಸಕ ಎನ್.ಮಹೇಶ್, ನಗರಸಭೆ ಅಧ್ಯಕ್ಷೆ ರೇಖಾ ರಮೇಶ್, ಉಪಾಧ್ಯಕ್ಷ ಎ.ಪಿ.ಶಂಕರ್, ಉದ್ಯಮಿ ನಿಶಾಂತ್, ಕೆಎಂಎಫ್ ನಿರ್ದೇಶಕ ನಂಜುಂಡಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ತಾಲೂಕು ಅಧ್ಯಕ್ಷ ಪುಟ್ಟಣ್ಣ, ಉಪಾಧ್ಯಕ್ಷ ರಾಜು, ಮುಖಂಡರಾದ ವೀರಭದ್ರಸ್ವಾಮಿ ಮತ್ತಿತರರಿದ್ದರು.