ಅಪ್ರಾಪ್ತೆಯ ಅತ್ಯಾಚಾರ ಸಾಬೀತು ಅಪರಾಧಿಗೆ 20 ವರ್ಷ ಕಠಿನ ಶಿಕ್ಷೆ

Gavel on desk. Isolated with good copy space. Dramatic lighting.
Gavel on desk. Isolated with good copy space. Dramatic lighting.
Published on

ಮಂಗಳೂರು : ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಆರೋಪ ಶುಕ್ರವಾರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 20 ವರ್ಷಗಳ ಕಠಿನ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.


ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ(26) ಶಿಕ್ಷೆಗೊಳಗಾದವನು. 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿಕೊಂಡು ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಪರಿಣಾಮ ಬಾಲಕಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ವೃತ್ತ ನಿರೀಕ್ಷಕ ಶಿವ ಕುಮಾರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.


ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್‌ಎ ವರದಿಗಳು, ಸಾಕ್ಷೃ, ಪೂರಕ ಸಾಕ್ಷೃ ಪರಿಗಣಿಸಿ ಹಾಗೂ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯವು ಆರೋಪಿತನ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ.


ಆ.2ರಂದು ನ್ಯಾಯಾಧೀಶರಾದ ಮಾನು ಕೆ.ಎಸ್.ಅವರು ಆರೋಪಿಗೆ ಭಾ.ದಂ.ಸಂ. ಕಲಂ 376(2)(ಎನ್) ಮತ್ತು ಕಲಂ 6 ಪೊಕ್ಸೋ ಕಾಯಿದೆಯಂತೆ 20 ವರ್ಷಗಳ ಕಠಿನ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 357 (ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆಯಡಿಯಲ್ಲಿ ನೊಂದ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1,50,000 ರೂ. ಹಾಗೂ ನೊಂದ ಬಾಲಕಿಯ ಹೆಣ್ಣು ಮಗುವಿಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ಅವರು ಸಾಕ್ಷಿದಾರರನ್ನು ವಿಚಾರಿಸಿ ವಾದ ಮಂಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net