ಮದರಸ ಬಾಲಕಿಯರಿಗೆ ಕಿರುಕುಳ: ಬೆಳ್ತಂಗಡಿಯ ಉಸ್ತಾದ್ ಬಂಧನ

Madani
Published on

ಪುತ್ತೂರು (ದ.ಕ.): ಮದರಸ ಶಿಕ್ಷಣಕ್ಕಾಗಿ ಬರುತ್ತಿದ್ದ ಇಬ್ಬರು ಅಪ್ರಾಪ್ತ ವಯಸ್ಸಿನ ಸಹೋದರಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮದರಸದ ಉಸ್ತಾದ್‌ನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಕುಂಡಡ್ಕದಲ್ಲಿರುವ ಶಂಶುಲ್ ಹುದಾ ಮದ್ರಸಾ ಶಾಲೆಯ ಉಸ್ತಾದ್ ಸಿರಾಜುದ್ದೀನ್ ಮದನಿ ಬಂಧಿತ ಆರೋಪಿ. ಪುತ್ತಿಲದ ಈ ಬಾಲಕಿಯರು ಶಂಶುಲ್ ಹುದಾ ಮದ್ರಸಾ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಜ.28ರಂದು ರಾತ್ರಿ ಮದರಸಕ್ಕೆ ತೆರಳಿ ವಾಪಸ್ ಮನೆಗೆ ಬಂದ ಸಹೋದರಿಯರು ತಮಗೆ ಉಸ್ತಾದ್ ಸಿರಾಜುದ್ದೀನ್ ಮದನಿ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ತಾಯಿಗೆ ಮಾಹಿತಿ ನೀಡಿದ್ದರು. ಒಂದು ವರ್ಷದಿಂದ ಉಸ್ತಾದ್ ತನ್ನ ರೂಮಿನಲ್ಲಿ ಇವರಿಗೆ ಕಿರುಕುಳ ನೀಡುತ್ತಿದ್ದ. ಬಾಲಕಿಯರ ತಾಯಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗೆ ಮಂಗಳೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net