

ಉಡುಪಿ: ಕೋಟ ಠಾಣಾ ವ್ಯಾಪ್ತಿಯಲ್ಲಿ 4 ವರ್ಷದ ಹಿಂದೆ ನಡೆದ ಅಪ್ರಾಪ್ತ ಬಾಲಕಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ನೀಡಿ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಅದೇಶ ಹೊರಡಿಸಿದೆ.
ಬಾಳೆಕುದ್ರು ನಿವಾಸಿ ಅಶೋಕ್ (32) ಶಿಕ್ಷೆಗೆ ಒಳಗಾದವನು. ಈತ 15ರ ಹರೆಯ ನೊಂದ ಬಾಲಕಿಯನ್ನು ಪರಿಚಯ ಮಾಡಿಕೊಂಡು, ಶಾಲೆಗೆ ಹೋಗುವ ಸಮಯದಲ್ಲಿ ತನ್ನ ಕಾರಿನಲ್ಲಿ ಪರಿಚತ ವ್ಯಕ್ತಿಯ ಮನೆಗೆ ಬಲತ್ಕಾರವಾಗಿ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ಮಾಡಿದ್ದು, ನಂತರ ಮನೆಗೆ ಕರೆದುಕೊಂಡು ಬಂದು ಬಿಟ್ಟಿದ್ದಾನೆ. ನೊಂದ ಬಾಲಕಿ ಬೇಸರದಲ್ಲಿರುವುದನ್ನು ಗಮನಿಸಿದ ಆಕೆಯ ಮನೆಯವರು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದ್ದು, ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ 20 ವರ್ಷ ಜೈಲು, 23,000 ರೂ. ದಂಡ ವಿಧಿಸಿದೆ. ಬಾಲಕಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದೆ. ಕೃತ್ಯಕ್ಕೆ ಸಹಕರಿಸಿದ ವ್ಯಕ್ತಿ ಸಾಕ್ಷ್ಯಾಧಾರ ಕೊರತೆಯಿಂದ ಬಿಡುಗಡೆಯಾಗಿದ್ದಾನೆ.