ಪೋಷಣ್ ಮಾಸಾಚರಣೆ, ಆಹಾರ ಪ್ರದರ್ಶನ

poshan-1
ಪೋಷಣ್ ಮಾಸಾಚರಣೆ ಅಭಿಯಾನದ ಅಂಗವಾಗಿ ಪೌಷ್ಠಿಕ ಆಹಾರ ಪ್ರದರ್ಶನ ಮತ್ತು ಗರ್ಭಿಣಿ ಮಹಿಳೆಯರಿಗೆ ಸೀಮಂತ ಶಾಸ್ತ್ರ ಕಾರ್ಯಕ್ರಮದಲ್ಲಿ ನಾವುಂದ ಪಂಚಾಯಿತಿ ಅಧ್ಯಕ್ಷ ನರಸಿಂಹ ದೇವಾಡಿಗ, ಉಪಾಧ್ಯಕ್ಷೆ ಸುಲೋಚನ ಗಾಣಿಗ, ಸದಸ್ಯರಾದ ಗಣೇಶ ಪೂಜಾರಿ, ಶಾರದಾ ಪೂಜಾರಿ, ನಾವುಂದ ಲಯನ್ಸ್ ಕ್ಲಬ್ ಕಾರ್ಯದರ್ಶಿ ರಾಜು ಬಿ.ದೇವಾಡಿಗ, ಖಜಾಂಚಿ ಗುರುರಾಜ ಶೇಟ್ ಇದ್ದರು
Published on

ಕುಂದಾಪುರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕುಂದಾಪುರ, ನಾವುಂದ ಗ್ರಾಪಂ ಹಾಗೂ ಲಯನ್ಸ್ ಕ್ಲಬ್ ನಾವುಂದ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ ಅಭಿಯಾನದ ಅಂಗವಾಗಿ ಪೌಷ್ಠಿಕ ಆಹಾರ ಪ್ರದರ್ಶನ ಮತ್ತು ಗರ್ಭಿಣಿ ಮಹಿಳೆಯರಿಗೆ ಸೀಮಂತ ಶಾಸ್ತ್ರ ಕಾರ್ಯಕ್ರಮ ನಾವುಂದ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ನಡೆಯಿತು.

ನಾವುಂದ ಪಂಚಾಯಿತಿ ಅಧ್ಯಕ್ಷ ನರಸಿಂಹ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸುಲೋಚನ ಗಾಣಿಗ, ಸದಸ್ಯರಾದ ಗಣೇಶ ಪೂಜಾರಿ, ಶಾರದಾ ಪೂಜಾರಿ, ನಾವುಂದ ಲಯನ್ಸ್ ಕ್ಲಬ್ ಕಾರ್ಯದರ್ಶಿ ರಾಜು ಬಿ.ದೇವಾಡಿಗ, ಖಜಾಂಚಿ ಗುರುರಾಜ ಶೇಟ್, ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ವಿನಯ, ಸಂಜೀವಿನ ಒಕ್ಕೂಟದ ಅಧ್ಯಕ್ಷೆ ಪದ್ಮಾವತಿ ಪೂಜಾರಿ, ಸಿ.ಎಚ್.ಒ ಅಶ್ವಿನಿ, ನಾವುಂದ ಪಂಚಾಯಿತಿ ಪಿಡಿಒ ಗಣೇಶ ಎಂ. ಉಪಸ್ಥಿತರಿದ್ದರು. ಅಂಗನವಾಡಿ ಮೇಲ್ವಿಚಾರಕಿ ಬೇಬಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ತಾಲೂಕು ಸಂಯೋಜಕ ಮಂಜುನಾಥ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net