

ಬೆಂಗಳೂರು: ರಾಜ್ಯದಲ್ಲಿ ನ.16ರಿಂದ ನ.19ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ನ.16ರಿಂದ ನಾಲ್ಕು ದಿನ ಹಿಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ 3 ದಿನ ಹಿಂದೆ ಇದ್ದ ಕನಿಷ್ಠ ಹಾಗೂ ಗರಿಷ್ಠ ತಪಾಮಾನದಲ್ಲಿ ಸರಾಸರಿ 5-6 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ.