

ಬೇಲೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಬುಧವಾರ ಪೋಸ್ಟ್ ಕಾರ್ಡ್ ಚಳವಳಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಆಶಾ ಕಾರ್ಯಕರ್ತೆಯರ ಸಂಘದ ತಾಲೂಕು ಅಧ್ಯಕ್ಷೆ ತಾಹಿರಾಬಾನು ಮಾತನಾಡಿ, ಈ ಹಿಂದೆಯೂ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಪ್ರಯೋಜನವಾಗಿಲ್ಲ. ಹೀಗಾಗಿ ಅನಿವಾರ್ಯವಾಗಿ ಜು.10ರಿಂದ ರಾಜ್ಯಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟ ಹೋರಾಟ ಆರಂಭಿಸಲಾಗಿದೆ ಎಂದು ಹೇಳಿದರು.
ಮಾಸಿಕ 12 ಸಾವಿರ ರೂ. ಗೌರವಧನ ನೀಡಬೇಕು. ಕರೊನಾ ವಿರುದ್ಧದ ಹೋರಾಟಕ್ಕೆ ಅಗತ್ಯ ಇರುವಷ್ಟು ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕು. ಸೋಂಕು ದೃಢಪಟ್ಟ ಕಾರ್ಯಕತೆರ್ಯರಿಗೆ ಉಚಿತ ಚಿಕಿತ್ಸೆ ಜತೆಗೆ ಪರಿಹಾರ ನೀಡಬೇಕೆಂಬ ಬೇಡಿಕೆಯ ಪತ್ರವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ ಎಂದರು.
ಆಶಾ ಕಾರ್ಯಕತೆರ್ಯರಾದ ಶಾರದಾ, ಮಂಗಳಾ, ಮಂಜುಳಾ, ಕುಸುಮಾ, ನಾಗರತ್ನಾ, ವೇದ, ಛಾಯ ಇದ್ದರು.