ಹುದ್ದೆ ಭರ್ತಿ ವಿಳಂಬ, ಶಿಕ್ಷಣ ಸಂಸ್ಥೆಗಳಿಗೆ ಮಾರಕ; ಸಿರಿಗೆರೆ ಶ್ರೀ ಕಳವಳ

SIRIGERE SWAMIJI (2)
Published on

ಚಳ್ಳಕೆರೆ: ಶಿಕ್ಷಣದಿಂದ ಸಂಸ್ಕಾರವಂತ ಸಮಾಜ ನಿರ್ಮಾಣ ಆಗಬೇಕು. ಬದಲಾಗುತ್ತಿರುವ ಸಮಾಜಕ್ಕೆ ಅನುಗುಣವಾಗಿ ಶಿಕ್ಷಣ ಜಾಗೃತಿಯಲ್ಲಿ ಬದಲಾವಣೆ ಕಂಡುಕೊಳ್ಳಬೇಕಿದೆ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿಚಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಟ್ರಸ್ಟ್ ನಗರದ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ, ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಅನುದಾನಕ್ಕೆ ಒಳಪಟ್ಟಿರುವ ಶಾಲಾ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹತ್ತು ವರ್ಷಗಳ ತನಕ ಭರ್ತಿ ಮಾಡದೆ ಇರುವುದು ಶಿಕ್ಷಣ ವ್ಯವಸ್ಥೆಗೆ ಮಾರಕ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net