ಶಿರಸಿ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ವಿಳಂಬ, ಶಾಸಕ ಶಿವರಾಮ ಹೆಬ್ಬಾರ್ ಕಿಡಿ

27sirsi5 HEBBAR HOSP MEET
Published on

ಶಿರಸಿ: ವ್ಯಕ್ತಿಯೊಬ್ಬರ ಶವ ಪರೀಕ್ಷೆ ವಿಳಂಬವಾಗಿದೆ ಎಂದು ಆರೋಪಿಸಿ ಶಾಸಕ ಶಿವರಾಮ ಹೆಬ್ಬಾರ್ ವೈದ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶನಿವಾರ ನಡೆಯಿತು.
ಇಲ್ಲಿಯ ಬಿಸಲಕೊಪ್ಪದ ಮಹಾದೇವ ಲಿಂಗಾ ಹಸ್ಲರ್ ಕಾಲು ಜಾರಿ ಬಿದ್ದು ಶನಿವಾರ ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆ ನಡೆಸುವ ಸಲುವಾಗಿ ಕುಟುಂಬಸ್ಥರು ಪೊಲೀಸ್ ದೂರು ದಾಖಲಿಸಿ, ಮರಣೋತ್ತರ ಪರೀಕ್ಷೆಗಾಗಿ ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ತಂದಿದ್ದರು.

ಈ ವೇಳೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಆಸ್ಪತ್ರೆಗೆ ಬಂದ ಶಾಸಕ ಶಿವರಾಮ ಹೆಬ್ಬಾರ್, ಕುಟುಂಬ ಶವಾಗಾರದ ಮುಂದೆ ಕಾಯುತ್ತ ನಿಂತಿರುವುದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ, ಆಸ್ಪತ್ರೆಯ ವೈದ್ಯರನ್ನು ಕರೆಸಿ ವಿಳಂಬ ಮಾಡುತ್ತಿರುವ ಬಗ್ಗೆ ಕಾರಣ ಕೇಳಿದರು. ಆದರೆ, ಈ ಕುರಿತಂತೆ ಸೂಕ್ತ ಉತ್ತರ ವೈದ್ಯರಿಂದ ಬರದ ಕಾರಣ ಆಕ್ರೋಶಗೊಂಡ ಶಾಸಕರು, ವೈದ್ಯರ ಕಾರ್ಯ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಡಿಎಚ್​ಒ ಅವರಿಗೂ ದೂರವಾಣಿ ಮೂಲಕ ಸಂರ್ಪಸಿ, ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ನಿರ್ಲಕ್ಷ್ಯ ತೋರುತ್ತಿರುವ ಬಗ್ಗೆ ಆಕ್ಷೇಪಿಸಿದರು. ಸತ್ತ ವ್ಯಕ್ತಿಯ ಕುಟುಂಬವನ್ನು ಕಾಯಿಸಬಾರದು. ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಡುವೆ ಹೊಂದಾಣಿಕೆ ಇಲ್ಲದ ಕಾರಣ ಈ ರೀತಿ ಆಗುತ್ತಿದೆ. ಬಡವರು ಸತ್ತರೆ ಇಲ್ಲಿ ಕೇಳುವವರೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net