ರಾಹುಲ್ ಗಾಂಧಿ ‘ರಾವಣ’ ಫೋಸ್ಟರ್‌ಗೆ ಆಕ್ರೋಶ: ಮಂಡ್ಯದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Congress protest against BJP mandya
Published on

ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ರಾವಣ ಫೋಸ್ಟರ್ ಮೂಲಕ ಬಿಜೆಪಿ ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿ ನಗರದಲ್ಲಿ ಶನಿವಾರ ಕಾಂಗೆಸ್ ಕಾರ್ಯಕರ್ತರು ಪ್ರತಿಭಟಿಸಿದರು.

ಕಲ್ಲಹಳ್ಳಿಯಲ್ಲಿ ಇರುವ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಪಕ್ಷ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಬಗ್ಗೆ ಧರ್ಮ ವಿರೋಧಿತನದ ಫೋಸ್ಟರ್‌ಗಳನ್ನು ಬಳಸಿದೆ. ಫೋಸ್ಟರ್‌ನಲ್ಲಿ ನವಯುಗದ ರಾವಣ ಎಂದು ಬಿಜೆಪಿ ಬಿಂಬಿಸಿದೆ. ಹೊಸ ಯುಗದ ರಾವಣ ಬಂದಿದ್ದಾನೆ. ಅವನು ದುಷ್ಟ, ಧರ್ಮ ವಿರೋಧಿಯಾಗಿದ್ದಾನೆ. ಅಷ್ಟೇ ಅಲ್ಲದೆ ರಾಮನ ವಿರೋಧಿಯಾಗಿದ್ದು, ಭಾರತವನ್ನು ನಾಶಮಾಡುವುದೇ ಗುರಿಯಾಗಿದೆ ಎಂದು ಬರೆಯಲಾಗಿದೆ. ಇದು ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಎಂಎಲ್‌ಸಿ ದಿನೇಶ್ ಗೂಳಿಗೌಡ, ಮಾಜಿ ಎಂಎಲ್‌ಸಿ ಬಿ.ರಾಮಕೃಷ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net