ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಜೂ.13ರ ಬೆಳಗ್ಗೆ 8.30ಕ್ಕೆ

Kempegowda
Published on

ಮೈಸೂರು: ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಹಾಗೂ ಪ್ರಚಾರ ವಾಹನದ ಚಾಲನಾ ಕಾರ್ಯಕ್ರಮ ಜೂ.13ರ ಬೆಳಗ್ಗೆ 8.30ಕ್ಕೆ ನಗರದ ಕುವೆಂಪುನಗರದ ಬಂದಂತಮ್ಮ ಕಾಳಮ್ಮ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ, ಜಿ.ಡಿ.ಹರೀಶ್‌ಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಸಾ.ರಾ.ಮಹೇಶ್, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಮುಖಂಡ ಕವೀಶ್‌ಗೌಡ ಸೇರಿದಂತೆ ಜನಪ್ರತಿನಿಧಿಗಳು, ಸಮಾಜದ ವಿವಿಧ ರಂಗದ ಗಣ್ಯರು ಹಾಗೂ ಮುಖಂಡರು ಪಾಲ್ಗೊಳ್ಳುತ್ತಿದ್ದಾರೆ ಎಂದು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಪಿ.ಪ್ರಶಾಂತ್‌ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದಿಚುಂಚನಗಿರಿ ಶಾಖಾಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜೂ.27ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ನಗರದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net