ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Published on

ಸಿಂಧನೂರು: ನಗರದ ಕುಷ್ಟಗಿ ರಸ್ತೆ ಮಾರ್ಗದಲ್ಲಿರುವ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪದವಿಗಳ ಪ್ರವೇಶಕ್ಕೆ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಮಹಿಳಾ ಅಭ್ಯರ್ಥಿಗಳಿಂದ ಸರ್ಕಾರದ ಯುಯು ಸಿಎಂಎಸ್ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸ್ನಾತಕೋತ್ತರ ಕೇಂದ್ರದ ಸಂಯೋಜಕ ಡಾ.ಕೆ.ಪಿ.ಸುರೇಶ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಯು ಪ್ರವೇಶ ಪಡೆಯಲು ಕೌನ್ಸೆಲಿಂಗ್‌ಗೆ ಹಾಜರಾಗಿ ಮೆರಿಟ್, ಕೆಟಗರಿ ಆಧಾರದಲ್ಲಿ ಪ್ರವೇಶಾತಿ ಪಡೆದುಕೊಳ್ಳಬಹುದಾಗಿದೆ. ಕೌನ್ಸೆಲಿಂಗ್ ದಿನಾಂಕವನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.

ಎಂ.ಎ. ವಿಭಾಗದಲ್ಲಿ ಕನ್ನಡ, ಇಂಗ್ಲಿಷ್, ಅರ್ಥಶಾಸ್ತ್ರ, ಇತಿಹಾಸ, ರಾಜ್ಯಶಾಸ್ತ್ರ, ಭೂಗೋಳಶಾಸ್ತ್ರ, ಶಿಕ್ಷಣ, ಎಂ.ಕಾಂ ವಾಣಿಜ್ಯ ಶಾಸ್ತ್ರ, ಎಂ.ಎಸ್ಸಿ ಗಣಿತಶಾಸ್ತ್ರ, ಕಂಪ್ಯೂಟರ್ ಸೈನ್ಸ್ (ಗಣಕ ಅಧ್ಯ ಯನ) ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 15ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆ. 15 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. 9449577652, ಯುಯು ಸಿಎಂಎಸ್ ನಿರ್ವಾಹಕ ಶ್ರೀ ನಿವಾಸ.ಕೆ. 8105489490ಗೆ ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net