

ಹುಬ್ಬಳ್ಳಿ : ಕನ್ನಡ ಚಲನಚಿತ್ರದ ಮೇರು ನಟರಾದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಮತ್ತು ಬಿ. ಸರೋಜಾ ದೇವಿ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತೀರ್ಮಾನಿರುವುದನ್ನು ಶಾಸಕ ಮಹೇಶ ಟೆಂಗಿನಕಾಯಿ ಸ್ವಾಗತಿಸಿದ್ದಾರೆ.
ಡಾ. ವಿಷ್ಣುವರ್ಧನ್ ಅವರ ಕಾಯಂ ಸಮಾಧಿಗಾಗಿ ರಾಜ್ಯ ಸರ್ಕಾರ ಶೀಘ್ರ ಭೂಮಿ ಮಂಜೂರು ಮಾಡಲಿ ಎಂದು ಶಾಸಕ ಟೆಂಗಿನಕಾಯಿ ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.
ಕನ್ನಡ ಚಿತ್ರರಂಗದ ನಟನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ಡಾ. ವಿಷ್ಣುವರ್ಧನ್ ಅಬವರು ನಾಗರಹಾವು ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ಅತ್ಯಂತ ಯಶಸ್ವಿ ನಟನಾಗಿ ಬಂಧನದಂತಹ ಅನೇಕ ಚಿತ್ರಗಳಲ್ಲಿ ನಟಿಸಿರುವ ವಿಷ್ಣುದಾದಾ ಅವರಿಗೆ ಮರಣೋತ್ತರ ಅತ್ಯುನ್ನತ ಪ್ರಶಸ್ತಿ ದೊರೆತಿರುವುದು ಅವರಿಗೆ ಸಂದ ಗೌರವವಾಗಿದೆ ಎಂದು ಹೇಳಿದ್ದಾರೆ.
ಬಹುಭಾಷಾ ನಟಿ ಬಿ. ಸರೋಜಾದೇವಿ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಯಶಸ್ವಿ ನಟಿಸಿದ್ದಾರೆ. ರಾಜ್ಯವಷ್ಟೇ ಅಲ್ಲದೇ, ಹೊರರಾಜ್ಯಗಳಲ್ಲಿಯೂ ಮನೆಮಾತಾಗಿದ್ದ ನಟಿ ಬಿ. ಸರೋಜಾದೇವಿ ಅವರಿಗೆ ಮರಣೋತ್ತರ ಅತ್ಯುನ್ನತ ಕರ್ನಾಟಕ ರತ್ನ ಪ್ರಶಸಿ ್ತಡಿ ಗೌರವಿಸಿದ್ದು, ಅವರ ಪ್ರತಿಭೆಗೆ ಸಂದ ಗೌರವವಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.