ಉಪ ಚುನಾವಣೆ ಮುಂದೂಡಿಕೆ

WEB LOGO
Published on

ಧಾರವಾಡ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿಯಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಜರುಗಿಸಲು ರಾಜ್ಯ ಚುನಾವಣೆ ಆಯೋಗ ಆದೇಶಿಸಿ ವೇಳಾಪಟ್ಟಿಯೊಂದಿಗೆ ಸೂಚಿಸಿತ್ತು. ಆದರೆ ರಾಜ್ಯ ಚುನಾವಣೆ ಆಯೋಗ ಉಪ ಚುನಾವಣೆಗಳನ್ನು 15 ದಿನಗಳ ಮಟ್ಟಿಗೆ ಮುಂದೂಡಿ ಸೋಮವಾರ ಆದೇಶಿಸಿದೆ. ಈ ಕುರಿತು ಉಪ ಚುನಾವಣೆ ಜರುಗಿಸುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚುರ ಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net