ಪೌರ ಕಾರ್ಮಿಕರಿಗೆ ನೇರ ವೇತನ ಪಾವತಿಗೆ ಕ್ರಮ ಜಿಲ್ಲಾ ಮಟ್ಟದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಡಾ.ರಾಜೇಂದ್ರ ಕೆ.ವಿ. ಹೇಳಿಕೆ

Published on

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.


ದ.ಕ ಜಿಲ್ಲಾ ಪೌರ ಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ ಸಂಘದ ವತಿಯಿಂದ ಬುಧವಾರ ಮಂಗಳೂರು ಪುರಭವನದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಪೌರ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಇತರ ಕಾರ್ಮಿಕರನ್ನು ಖಾಯಂ ಮಾಡಬೇಕು ಎಂಬ ಬಗ್ಗೆ ಆಗ್ರಹವಿದೆ. ಆದರೆ, ಇದು ರಾಜ್ಯಮಟ್ಟದಲ್ಲಿ ನಿರ್ಧಾರವಾಗಬೇಕಾದ್ದರಿಂದ ಜಿಲ್ಲಾ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದು. ಆದರೆ, ಸಿಎಂ ಅವರೇ ಈ ಬಗ್ಗೆ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ನೆರವೇರುವ ಬಗ್ಗೆ ನಿರೀಕ್ಷೆಯಿದೆ ಎಂದರು.


ಪೌರಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕಾದ ಜವಾಬ್ದಾರಿಯಿದೆ. ಜತೆಗೆ ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕು. ಹಾಗೂ ಪೌರಕಾರ್ಮಿಕರ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ತರಬೇತಿ ನೀಡುವ ನಿಟ್ಟಿನಲ್ಲಿ ಆದ್ಯತೆ ನೀಡಬಹುದಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net