

ಬೆಟ್ಟದಪುರ: ಬೆಟ್ಟದಪುರದ ಸೆಸ್ಕ್ ಉಪವಿಭಾಗದ ಕಣಗಾಲು ಶಾಖಾ ವ್ಯಾಪ್ತಿಯಲ್ಲಿನ ಕಣಗಾಲು ವಿ.ವಿ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ನಿಮಿತ್ತ ಆ.20 ರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕಣಗಾಲು, ಹಲಗನಹಳ್ಳಿ, ದೊಡ್ಡಕಮರವಳ್ಳಿ, ಚಪ್ಪರದಹಳ್ಳಿ ಹಾಗೂ ಹಾರನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್
ಸರಬರಾಜು ಸ್ಥಗಿತಗೊಳ್ಳಲಿದೆ. ಕೃಷಿ ಪಂಪ್‌ಸೆಟ್ ಗ್ರಾಹಕರಿಗೆ ಅನುಕೂಲವಾಗುವಂತೆ ಅಂದು ರಾತ್ರಿ ಸಮಯದಲ್ಲಿ ಅಧಿಕ ಸಾಮರ್ಥ್ಯದ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲಕ್ಷ್ಮೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.