

ವಿಜಯವಾಣಿ ಸುದ್ದಿಜಾಲ ಧಾರವಾಡ
ತಬಕದ ಹೊನ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನ. 21ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ತ್ರೈ ಮಾಸಿಕ ಕಾಮಗಾರಿ ಕೈಗೊಳ್ಳುವುದರಿಂದ ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ತಬಕದಹೊನ್ನಳ್ಳಿ, ಬೀರವಳ್ಳಿ, ಬೆಂಡಲಗಟ್ಟಿ, ನೆಲ್ಲಿಹರವಿ, ಮಲಕನಕೊಪ್ಪ, ಹುಣಸಿಕಟ್ಟಿ, ಬಿದರಗಡ್ಡಿ, ಗಂಜಿಗಟ್ಟಿ, ಸೊಲಾರಕೊಪ್ಪ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.