

ಬೆಳಗಾವಿ: ತುರ್ತು ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ ಜೂ.11ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಎಂ.ಕೆ.ಹುಬ್ಬಳ್ಳಿಯ ವಿದ್ಯುತ್ ವಿತರಣಾ ಕೇಂದ್ರದಿಂದ ಪೂರೈಕೆಯಾಗುವ ಹಿರೇಮುನವಳ್ಳಿ, ಚಿಕ್ಕಮುನವಳ್ಳಿ, ಗಾಡಿಕೊಪ್ಪ, ಜಿಕನೂರ, ಪಾರಿಶ್ವಾಡ, ಇಟಗಿ, ಬೋಗೂರ, ಬೇಡರಹಟ್ಟಿ, ಹಿರೇಹಟ್ಟಿಹೊಳಿ, ಚಿಕ್ಕಹಟ್ಟಿಹೊಳಿ ಹಾಗೂ ಕರವಿನಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಗಂದಿಗವಾಡ ಉಪಕೇಂದ್ರದಿಂದ ಸರಬರಾಜು ಆಗುವ ಗಂದಿಗವಾಡ, ಹಿರೇ ಅಂಗ್ರೋಳ್ಳಿ, ಚಿಕ್ಕ ಅಂಗ್ರೊಳ್ಳಿ, ಹಂದೂರ, ಕೇರವಾಡ, ಹುಲಿಕೊತ್ತಲ, ಇಟಗಿ, ಬೋಗೂರ, ಬೇಡರಹಟ್ಟಿ, ತೊಲಗಿ, ಬಿಳಕಿ, ಅವರೊಳ್ಳಿ ಹಾಗೂ ಕಗ್ಗಣಗಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಹೆಸ್ಕಾಂ ಗ್ರಾಮೀಣ ಅಭಿಯಂತರರು ತಿಳಿಸಿದ್ದಾರೆ.