

ಶಿವಮೊಗ್ಗ: ಹರಿಯಾಣದಲ್ಲಿ ಮತ್ತೆ ಪಕ್ಷ ಅಧಿಕಾರ ಹಿಡಿದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ನೇತೃತ್ವದಲ್ಲಿ ಸೊರಬ ತಾಲೂಕು ಆನವಟ್ಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ಸಂಜೆ ವಿಜಯೋತ್ಸವ ನಡೆಸಲಾಯಿತು.
ಪಕ್ಷ ಹಾಗೂ ರಾಷ್ಟ್ರೀಯ ನಾಯಕರ ಪರ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಸೊರಬ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಜಿಲ್ಲಾ ಉಪಾಧ್ಯಕ್ಷೆ ಪದ್ಮಿನಿ ರಾವ್, ಜಿಪಂ ಮಾಜಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಎಂ.ಬಿ.ಹರಿಕೃಷ್ಣ, ಸಿ.ಎಚ್.ಮಾಲತೇಶ್, ಕಾರ್ಯದರ್ಶಿ ವಿನ್ಸೆಂಟ್ ರೊಡ್ರಿಗಸ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಸಿದ್ದಲಿಂಗಪ್ಪ, ಪ್ರಮುಖರಾದ ಕೊಟ್ರೇಶ್, ರಾಜು ಬಡಿಗೇರ್ ಮುಂತಾದವರಿದ್ದರು.