ದೇವಳ ಬ್ರಹ್ಮಕಲಶೋತ್ಸವದಿಂದ ಶಕ್ತಿ ವೃದ್ಧಿ : ಪೆರ್ಲ ಬೈಪಾಡಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅನಿಸಿಕೆ

Bel_Brahmakalashotsava
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಮೊದಲ ಪೂಜೆಯನ್ನು ಸ್ವೀಕರಿಸುವ ಗಣಪತಿ ದೇವರು ಶಕ್ತಿವಂತ ಮತ್ತು ಯುಕ್ತಿವಂತನಾಗಿ ಎಲ್ಲ ವಿಘ್ನಗಳನ್ನು ನಿವಾರಣೆ ಮಾಡುವ ಶಕ್ತಿ ಮತ್ತು ಬುದ್ಧಿವಂತಿಕೆ ಹೊಂದಿರುವ ದೇವರು, ದೋಷ ಪರಿಹಾರ ಮತ್ತು ನಂಬಿದವರಿಗೆ ಉತ್ತಮ ಫಲ ನೀಡುವ ಗಣಪತಿ ದೇವಸ್ಥಾನಗಳಲ್ಲಿ ದೇವರ ಶಕ್ತಿ ಜಾಗೃತಿಗಾಗಿ 12 ವರ್ಷಕೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವದಿಂದ ಶಕ್ತಿ ವೃದ್ಧಿಯಾಗುತ್ತದೆ. ಇಲ್ಲಿಯ ಭಕ್ತರು ಶ್ರದ್ಧಾಭಕ್ತಿಯಿಂದ ಉತ್ತಮ ಕೆಲಸ ಮಾಡಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭ ಮಾಡುವಾಗ ಪ್ರಾಯೋಗಿಕವಾಗಿ ಈ ಗ್ರಾಮವನ್ನು ಆಯ್ಕೆಮಾಡಲಾಗಿದ್ದು ಯೋಜನೆಯ ಕೆಲಸ ಕಾರ್ಯ ಯಶಸ್ವಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನಃಪ್ರತಿಷ್ಠಾಪನಾ ಅಷ್ಟಬಂಧ ಬ್ರಹ್ಮಕಲಶೋತ್ಸವದ 5ನೇ ದಿನದ ಕಾರ್ಯಕ್ರಮದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಬ್ರಹ್ಮಕಲಶೋತ್ಸವದ ಯಶಸ್ವಿಗೆ ಸಹಕರಿಸಿದ ದಾನಿಗಳನ್ನು ಮತ್ತು ಸಮಿತಿಯ ಪದಾಧಿಕಾರಿಗಳನ್ನು ಗೌರವಿಸಿದರು. ಬೆಂಗಳೂರು ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ ಅಧ್ಯಕ್ಷತೆ ವಹಿಸಿದ್ದರು.ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮಾತನಾಡಿ, ಬ್ರಹ್ಮಕಲಶದಿಂದ ಸಾಮಾಜಿಕವಾಗಿ ಬಹಳಷ್ಟು ಬದಲಾವಣೆಯಾಗುತ್ತದೆ ಎಂದರು. ಗುರುವಾಯನಕೆರೆ ಎಕ್ಸೆಲ್ ಕಾಲೇಜು ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೋಟರಿ ವಕೀಲ ಶ್ರೀನಿವಾಸ ಗೌಡ ಶುಭ ಹಾರೈಸಿದರು. ಬಂದಾರು ಗ್ರಾಪಂ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕಣಿಯೂರು ರೈತ ಬಂಧು ಮಾಲೀಕ ಶಿವ ಶಂಕರ್ ನಾಯಕ್, ಪದ್ಮುಂಜ ಸಹಕಾರ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ ನಾಗಂದೋಡಿ, ಪ್ರದಾನ ಕಾರ್ಯದರ್ಶಿ ಹರೀಶ್ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಆನುವಂಶಿಕ ಮೊಕ್ತೇಸರ ಕುಕ್ಕಪ್ಪ ಗೌಡ ಕೋಡಿಮಜಲು, ಆಡಳಿತ ಸಮಿತಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಮಹಿಳಾ ಸಮಿತಿ ಅಧ್ಯಕ್ಷೆ ಶ್ವೇತಾ ಹಾರ್ತ್ಯಾರು, ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಫಲಸದ ಕೋಡಿ ಉಪಸ್ಥಿತರಿದ್ದರು. ವಿಶೇಷವಾಗಿ ಸಹಕಾರ ನೀಡಿದ ಮಮತಾ ಬಾಲಕೃಷ್ಣ ಪೂಜಾರಿ ಅವರನ್ನು ಗೌರವಿಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಬಿ.ಬಾಲಕೃಷ್ಣ ಪೂಜಾರಿ ಸ್ವಾಗತಿಸಿದರು. ಉಪನ್ಯಾಸಕ ಮೋಹನ ಗೌಡ ನಿರೂಪಿಸಿ, ಉಪನ್ಯಾಸಕ ದಿವಾ ಕೊಕ್ಕಡ ವಂದಿಸಿದರು. ಪೆರ್ಲ ಬೈಪಾಡಿ ಅಂಗನವಾಡಿ, ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಂದ ಸಾಂಸ್ಕೃಕ ಕಾರ್ಯಕ್ರಮ, ಬೆಳ್ತಂಗಡಿ ವಾಣಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ವಾಣಿ ಕಲಾ ವೈಭವ ನಡೆಯಿತು.

ಸನಾತನ ಭಾರತದ ಸಂಸ್ಕೃತಿ ಆಚಾರ ವಿಚಾರಗಳು ಉಳಿಸಲು ಇಂತಹ ಬ್ರಹ್ಮಕಲಶ, ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ ಸಾಧ್ಯ. ಎಲ್ಲರನ್ನು ಸಮಾನತೆಯಿಂದ ನೋಡಿ ಸಮಾಜದಲ್ಲಿ ಶೋಷಿತ ವರ್ಗದವರ ಸೇವೆಯ ಮೂಲಕ ಮಾಡಬೇಕು. ಡಾ.ಹೆಗ್ಗಡೆಯವರು ಮಾಡುತ್ತಿರುವ ಸೇವಾ ಕಾರ್ಯ ಮಾದರಿಯಾಗಿದೆ. ಕಿರಣ್ ಚಂದ್ರ ಡಿ.ಪುಷ್ಪಗಿರಿ, ಬೆಂಗಳೂರು ಉದ್ಯಮಿ https://www.vijayavani.net/compensation-for-accident-injury https://www.vijayavani.net/protest-against-kasturi-rangans-report-on-18

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net