ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

1111
Published on

ಬಳ್ಳಾರಿ : ನಗರ ಜೆಸ್ಕಾಂ ಉಪ ವಿಭಾಗ-2 ರ ವ್ಯಾಪ್ತಿಗೆ ಬರುವ 110/11ಕೆವಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ಇನ್‌ಫೆಂಟ್ರಿ ರಸ್ತೆಯಲ್ಲಿ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.10 ಮತ್ತು 11 ರಂದು ಎರಡು ದಿನಗಳ ಕಾಲ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ನ.10ರಂದು ಎಫ್-33 ಫೀಡರ್ ವ್ಯಾಪ್ತಿಯ ಕೆ.ಎಚ್.ಬಿ.ಕಾಲನಿ, ನೇತಾಜಿ ನಗರ, ಇನ್ನಾರೆಡ್ಡಿ ಲೇಔಟ್, ಇನ್‌ಫೆಂಟ್ರಿ ರಸ್ತೆ, ವಾಸವಿ ಶಾಲೆ, ಕೊಳಗಲ್‌ರಸ್ತೆ, ವಿದ್ಯಾನಗರ, ಕಲ್ಯಾಣಿ ಕಾಲನಿ, ಭತ್ರಿ ರೋಡ್, ಭತ್ರಿ, ಗುರು ಕಾಲನಿ, ಸತ್ಯವಾಣಿ ನಗರ, ಸಿದ್ದಾರ್ಥ ನಗರ, ವಿಯಾನಿ ಶಾಲೆ ಸೇರಿದಂತೆ ಇನ್ನು ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ನ.11ರಂದು ಎಫ್-7 ಫೀಡರ್‌ನ ಸಂಗನಕಲ್ಲು ರಸ್ತೆ, ಎಸ್.ಎನ್.ಪೇಟೆ 3ನೇ ಕ್ರಾಸ್, ಜಿಲ್ಲಾಸ್ಪತ್ರೆ, ರಾಘವ ಕಲಾಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡೆ, ಅಗಡಿ ಮಾರೆಪ್ಪ ಕಾಂಪೌಂಡ್, ರೂಪನಗುಡಿ ರಸ್ತೆ, ಮುಬರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ.ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಆಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮಕಟ್ಟೆ. ಎಫ್-9 ಫೀಡರ್‌ನ ನೆಹರು ಕಾಲನಿ 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ಶಂಕರ್ ಕಾಲನಿ, ಎಸ್.ಎನ್.ಪೇಟೆ 6ನೇ, 5ನೇ ಮತ್ತು 4ನೇ, 3ನೇ ಅಡ್ಡರಸ್ತೆ, ಡಿ.ಆರ್. ಗ್ರೌಂಡ್, ಕೂಲ್ ಕಾರ್ನರ್, ಡಬಲ್‌ರಸ್ತೆ, ಕೋಲಾಚಾಲಂ ಕಾಂಪೌಂಡ್, ರಾಯಲ್ ಸರ್ಕಲ್, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ತಾಲೂಕು ಕಚೇರಿ, ಡಿಸಿ ಕಚೇರಿ ಸೇರಿದಂತೆ ಇನ್ನು ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪ ವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net