

ಮಂಡ್ಯ: ತುರ್ತು ಕಾರ್ಯನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.9ರಂದು ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದ ಸುಭಾಷ್‌ನಗರ, ಆಶೋಕನಗರ, ವಿ.ವಿ ರಸ್ತೆ, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರಡಿ ರಸ್ತೆ, ನೆಹರುನಗರ, ಹೊಸಹಳ್ಳಿ, ದ್ವಾರಕನಗರ, ಗಾಂಧಿನಗರ, ಎನ್‌ಜಿಒ ಲೇಔಟ್, ಶ್ರೀರಾಮನಗರ, ಕಾವೇರಿನಗರ 1 ಮತ್ತು 2ನೇ ಹಂತ, ಚಂದ್ರದರ್ಶನ, ಚಾಮುಂಡೇಶ್ವರಿನಗರ, ಅನ್ನಪೂರ್ಣೇಶ್ವರಿನಗರ, ಶಂಕರನಗರ, ಇಂಡುವಾಳು, ಕಿರಗಂದೂರು, ಕಲ್ಲಹಳ್ಳಿ. ಕ್ಯಾತುಂಗೆರೆ, ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹೆಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ. ಹುಲಿಕೆರೆ, ಬಿ.ಹುಲಿಕೆರೆ ಮತ್ತು ಐ.ಪಿ ಮಾರ್ಗದಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.
ಅಂತೆಯೇ ಕೆ.ಐ.ಎ.ಡಿ.ಬಿ ವಿದ್ಯುತ್ ವಿತರಣಾ ಕೇಂದ್ರದ ನಗರ ಪ್ರದೇಶವಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕೆ ಬಡಾವಣೆ, ಎಂ.ಸಿ.ರಸ್ತೆ, ತಾವರೆಗೆರೆ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ದಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ, ಗ್ರಾಮಾಂತರ ಪ್ರದೇಶವಾದ ಶ್ರೀನಿವಾಸಪುರ ಗೇಟ್, ಹನಕೆರೆ ಐ.ಪಿ ವ್ಯಾಪ್ತಿ, ಬಸವನಪುರ ಐ.ಪಿ ವ್ಯಾಪ್ತಿ, ಬೂದನೂರು, ಭೂತನ ಹೊಸೂರು, ಚನ್ನಪ್ಪನದೊಡ್ಡಿ, ಅಂಬರಹಳ್ಳಿ, ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದ ಗ್ರಾಮಾಂತರ ಪ್ರದೇಶವಾದ ಹೊಡಾಘಟ್ಟ, ಕೀಲಾರ, ಹನಕೆರೆ, ಹಳೆಬೂದನೂರು, ಹೊಸಬೂದನೂರು, ಈಚಗೆರೆ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.