

ಮಂಗಳೂರು: ಮೆಸ್ಕಾಂ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ನಾಗುರಿ(ಎಕ್ಕೂರು) ಫೀಡರ್ ಮತ್ತು 11ಕೆವಿ ಪಂಪ್‌ವೆಲ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಅ.25ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮರೋಳಿ, ಪಡೀಲ್, ಅಳಪೆ, ಮೇಘನಗರ, ನಾಗುರಿ, ಗರೋಡಿ, ನೇತ್ರಾವತಿ ಬಡಾವಣೆ, ಪಂಪ್‌ವೆಲ್, ಕಪಿತಾನಿಯೊ, ರೆಡ್‌ಬಿಲ್ಡಿಂಗ್, ರೈಲ್ವೇಸ್ಟೇಷನ್, ಕ್ವಾಡ್ ಸೆಂ.ಟರ್, ಇಂಡಿಯಾನ ಹಾಸ್ಪಿಟಲ್, ನಿಟ್ಟೆ ಎಜುಕೇಷನ್ ಸೆಂಟರ್, ಮಹಾವೀರ ಸರ್ಕಲ್ ಪಂಪ್‌ವೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.