

ಮಂಗಳೂರು: ಮೆಸ್ಕಾಂ 33/11 ಕೆವಿ ಕದ್ರಿ ಉಪಕೇಂದ್ರದಿಂದ ಹೊರಡುವ 11 ಕೆವಿ ಕದ್ರಿ ಟಾಲ್‌ಗೇಟ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಒ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ನ.1ರಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ನಂತೂರು, ಕೊಚ್ಚಿನ್ ಬೇಕರಿ, ಕದ್ರಿ ಪಾರ್ಕ್ ಏರಿಯಾ, ಸರ್ಕ್ಯೂಟ್ ಹೌಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.