

ಮೈಸೂರು: ಜ್ಯೋತಿನಗರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಕೆಎಂಎಫ್ ಫೀಡರ್ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಆ.12 ರಂದು ಬೆಳಗ್ಗೆ 11 ರಿಂದ ಸಂಜೆ 4ರವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗೋಪಾಲಗೌಡ ಆಸ್ಪತ್ರೆ, ಬ್ರಿಗೇಡ್ ಅಪಾರ್ಟ್ಮೆಂಟ್, ವಾಟಿಕ ಅಪಾರ್ಟ್ಮೆಂಟ್, ನಂದಿನಿ ಹಾಲಿನ ಕೇಂದ್ರದವರೆಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ನಿಲುಗಡೆಯಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.