ವಿದ್ಯುತ್ ವ್ಯತ್ಯಯ 6ರಂದು

POWER CUT LOGO NEW
Published on

ನರಗುಂದ: ತಾಲೂಕಿನ ಕೊಣ್ಣೂರ ಗ್ರಾಮದ 110/11 ಕೆವಿ, ಶಿರೋಳ ಗ್ರಾಮದ 33 ಕೆವಿ ವಿದ್ಯುತ್ ವಿತರಣಾ ಉಪ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಸೆ. 6ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ವಿದ್ಯುತ್ ಪೊರೈಕೆ ಸಂಪೂರ್ಣ ಸ್ಥಗಿತಗೊಳ್ಳಲಿದೆ.


ತಾಲೂಕಿನ ಕೊಣ್ಣೂರ, ಶಿರೋಳ, ಹಿರೇಕೊಪ್ಪ, ಚಿಕ್ಕನರಗುಂದ, ಹದ್ಲಿ, ರಡ್ಡೇರನಾಗನೂರ, ಭೈರನಹಟ್ಟಿ, ವಾಸನ, ಬೆನಕನಕೊಪ್ಪ ಸೇರಿ ಒಟ್ಟು 9 ಗ್ರಾಪಂ ವ್ಯಾಪ್ತಿಗೆ ಒಳಪಡುವ ಸುತ್ತಮುತ್ತಲಿನ ವಿವಿಧ ಗ್ರಾಮಗಳಲ್ಲಿ ಸಂಪೂರ್ಣ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್ ಎಚ್.ಎಂ. ಖುದಾವಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net