

ಧಾರವಾಡ: ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನ. 29ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು 3ನೇ ತ್ರೈ ಮಾಸಿಕ ತುರ್ತುಪಾಲನಾ ಕಾಮಗಾರಿ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ತಬಕದಹೊನ್ನಳ್ಳಿ, ಬಿರವಳ್ಳಿ, ಬೆಂಡಲಗಟ್ಟಿ, ಆಸ್ತಕಟ್ಟಿ, ನೆಲ್ಲಿಹರವಿ, ಮಲಕನಕೊಪ್ಪ, ಹುಣಸಿಕಟ್ಟಿ, ಬಿದರಗಡ್ಡಿ, ಗಂಜಿಗಟ್ಟಿ, ಸೊಲಾರಕೊಪ್ಪ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಧಾರವಾಡ ತಾಲೂಕಿನ ವ್ಯಾಪ್ತಿಯ ಶೇಡಬಾಳ ಖಾನಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನ. 29ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ತುರ್ತುಪಾಲನಾ ಕಾಮಗಾರಿ ಕೈಗೊಳ್ಳುವುದರಿಂದ ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಗರಗ, ಹಂಗರಕಿ, ದುಬ್ಬದಮರಡಿ, ಅಗಸನಹಳ್ಳಿ, ಶೇಡಬಾಳ ಖಾನಾಪುರ, ತಡಕೋಡ, ಮಾದನಭಾವಿ, ಮುಗಳಿ, ಹೊಸಟ್ಟಿ, ಬೋಗೂರು, ಜಿರಗಿವಾಡ, ಕೊಟಬಾಗಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.