ತ್ರೈಮಾಸಿಕ ಕಾರ್ಯನಿರ್ವಹಣೆ: ಡಿ.11ರಂದು ಹಲವೆಡೆ ವಿದ್ಯುತ್ ವ್ಯತ್ಯಯ

Power cutt
Published on

ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಡಿ.11ರಂದು ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ನಗರ ಪ್ರದೇಶಗಳಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕ ಬಡಾವಣೆ, ಎಂ.ಸಿ.ರಸ್ತೆ, ತಾವರೆಗೆರೆ, ನೆಹರುನಗರ, ಉದಯಗಿರಿ, ಸಾದತ್ ಮೊಹಲ್ಲಾ, ಚನ್ನಯ್ಯ ಬಡಾವಣೆ, ಸಿದ್ದಾರ್ಥ ಬಡಾವಣೆ, ಬೆಂಗಳೂರು ಮುಖ್ಯರಸ್ತೆಯ ಹೆಬ್ಬಾಳ ಹಾಗೂ ಗ್ರಾಮಾಂತರ ಪ್ರದೇಶ ಗಳಾದ ಶ್ರೀನಿವಾಸಪುರ ಗೇಟ್, ಹನಕೆರೆ ಐ.ಪಿ ವ್ಯಾಪ್ತಿ, ಕೀಲಾರ ಐ.ಪಿ ವ್ಯಾಪ್ತಿ, ಬಸವನಪುರ ಐ.ಪಿ ವ್ಯಾಪ್ತಿ, ಬೂದನೂರು, ಭೂತನ ಹೊಸೂರು, ಚನ್ನಪ್ಪನದೊಡ್ಡಿ, ಅಂಬರಹಳ್ಳಿ, ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದ ಹೊಡಾಘಟ್ಟ, ಕೀಲಾರ, ಹನಕೆರೆ, ಹಳೆ ಬೂದನೂರು, ಹೊಸಬೂದನೂರು, ಈಚಗೆರೆ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಶ್ರೀನಿವಾಸಪುರ ಗೇಟ್, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಬೆಳಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net