ತುರ್ತು ಕಾರ್ಯನಿರ್ವಹಣೆ: ಜ.23ರಂದು ಹಲವೆಡೆ ವಿದ್ಯುತ್ ವ್ಯತ್ಯಯ

Power cutt
Published on

ಮಂಡ್ಯ: ತುರ್ತು ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಜ.23ರಂದು ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ನಗರ ಪ್ರದೇಶಗಳಾದ ಚಾಮುಂಡೇಶ್ವರಿನಗರ, ಅನ್ನಪೂರ್ಣೇಶ್ವರಿನಗರ, ಶಂಕರನಗರ, ಕ್ಯಾತುಂಗೆರೆ ಬಡಾವಣೆ , ವಿ.ವಿ ನಗರ, ಕಲ್ಲಹಳ್ಳಿ, ಬನ್ನೂರು ರಸ್ತೆ, ನಂದಿನ ಲೇಔಟ್, ಕಿರಗಂದೂರು ಬಡಾವಣೆ, ಮರೀಗೌಡ ಬಡಾವಣೆ ಹಾಗೂ ಗ್ರಾಮಾಂತರ ಪ್ರದೇಶಗಳಾದ ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ.ಹುಲಿಕೆರೆ, ಬಿ.ಹುಲಿಕೆರೆ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ಅಂದು ಬೆಳಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net