ತ್ರೈಮಾಸಿಕ ಕಾರ್ಯನಿರ್ವಹಣೆ: ಆ.19ರಂದು ಹಲವೆಡೆ ವಿದ್ಯುತ್ ವ್ಯತ್ಯಯ

202106290041209245_Power-shutdown-from-9-am-today_SECVPF
Published on

ಮಂಡ್ಯ: ಹಂಪಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಕೆಲಸ ಹಮ್ಮಿಕೊಂಡಿರುವುದರಿಂದ ಆ.19 ರಂದು ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗಲಿದೆ.

ಕೆರಗೋಡು, ದೊಡ್ಡಗರುಡನಹಳ್ಳಿ, ಬಿಳಿದೇಗಲು, ಮುದಗಂದೂರು, ಮಾರಗೌಡನಹಳ್ಳಿ, ಬಿ.ಹೊಸೂರು, ಹಂಪಾಪುರ, ಕಲ್ಮಂಟಿದೊಡ್ಡಿ, ಸೌದೇನಹಳ್ಳಿ, ಬೆಟ್ಟಹಳ್ಳಿ, ಬೀಚನಹಳ್ಳಿ, ಪುರದಕೊಪ್ಪಲು, ಎಂ.ಹೊನ್ನೇನಹಳ್ಳಿ, ಬಿದರಕಟ್ಟೆ, ಬೆನ್ನಹಟ್ಟಿ, ಮನುಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಅಂತೆಯೇ ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಪಣಕನಹಳ್ಳಿ, ಗೊರವಾಲೆ ಎನ್‌ಜೆವೈ ಮಾರ್ಗ ಮತ್ತು ಸಂಪಹಳ್ಳಿ ಐ.ಪಿ ಮಾರ್ಗದಲ್ಲಿ ತುರ್ತು ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಸಂಪಹಳ್ಳಿ, ಗೊರವಾಲೆ, ಬಿ.ಹೊಸಹಳ್ಳಿ, ಬೀರಗೌಡನಹಳ್ಳಿ, ಶಂಭೂನಹಳ್ಳಿ, ಕೋಣನಹಳ್ಳಿ, ಪಣಕನಹಳ್ಳಿ, ಹೊಳಲು, ಎಂ.ಜಿ.ಬಡಾವಣೆ, ತಂಡಸನಹಳ್ಳಿ, ಸಿದ್ದಯ್ಯನಕೊಪ್ಪಲು, ವೈ.ಯರಹಳ್ಳಿ, ಅವ್ವೇರಹಳ್ಳಿ, ಸಂಪಹಳ್ಳಿ ಐ.ಪಿ ಮಾರ್ಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆ.19ರಂದು ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net