ತ್ರೈಮಾಸಿಕ ಕಾರ್ಯನಿರ್ವಹಣೆ: ಡಿ.17ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

Power cutt
Published on

ಮಂಡ್ಯ: ತ್ರೈಮಾಸಿಕ ಕಾರ್ಯ ನಿರ್ವಹಣೆ ಹಿನ್ನೆಲೆಯಲ್ಲಿ ಡಿ.17ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಬಸರಾಳು, ಶಿವಪುರ, ಬೇಬಿ, ಕಂಬದಹಳ್ಳಿ, ಬಿದರಕಟ್ಟೆ, ಮಾರಸಿಂಗನಹಳ್ಳಿ, ಅಂಕುಶಾಪುರ, ಬೆನ್ನಹಟ್ಟಿ, ಶಾನಭೋಗನಹಳ್ಳಿ, ಬೊಮ್ಮನಹಳ್ಳಿ, ಅನುಕುಪ್ಪೆ, ಮನುಗನಹಳ್ಳಿ, ಎಂ.ಹಟ್ನ, ಗಣಿಗ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಬೆಳಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅಂತೆಯೇ ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಜೈನರ ಬೀದಿ, ಪೇಟೆ ಬೀದಿ, ಆನೆಕೆರೆ ಬೀದಿ, ಸಿಹಿನೀರು ಕೊಳ, ಶಂಕರಮಠ, ಮುಸ್ಲಿಂ ಬ್ಲಾಕ್, ಡವರಿ ಸಮಾಜ, ಕಾಳಿಕಾಂಬ ದೇವಸ್ಥಾನದ ಸುತ್ತ ಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 7ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net