

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಅನುಮೋದನೆ ನೀಡುವಂತೆ ಗ್ರಾಮಾಂತರ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಇಂಧನ ಸಚಿವ ಕೆ.ಜೆ ಜಾರ್ಜ್ ಅವರಿಗೆ ಮನವಿ ಮಾಡಿದರು. ಹೊಸಕೋಟೆ ನಗರದಲ್ಲಿ 400/200 ಕೆ.ವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ, ದೇವನಗುಂದಿ ಕೈಗಾರಿಕಾ ಪ್ರದೇಶದಲ್ಲಿ 220 ಕೆ.ವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ, ತಾತನೂರು, ಬಾನಹಳ್ಳಿ, ತಮ್ಮರಸನಹಳ್ಳಿ, ಎಂ ಸತ್ಯವಾರ, ಅಟ್ಟೂರಿನಲ್ಲಿ 66 ಕೆ.ವಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿದರು. ಈ ವೇಳೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ(ಕೆಪಿಟಿಸಿಎಲ್) ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್‌ಪಾಂಡೆ, ಬೆಂಗಳೂರು ವಿದ್ಯುತ್ ಪ್ರಸರಣ ನಿಗಮದ(ಬೆಸ್ಕಾಂ)ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ ಇದ್ದರು.