

ಅರಸೀಕೆರೆ : ತಾಲೂಕಿನ ಕೋಳಗುಂದ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಶನಿವಾರ ಸಂಜೆ ಸೆಸ್ಕ್ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಲ್ಪಿಸಿದರು.
ಬಿಲ್ ಬಾಕಿ ಹೆಸರಿನಲ್ಲಿ ಕಳೆದ ಸೆ.30ರಂದು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿತ್ತು. ಈ ಬಗ್ಗೆ ಅ.6ರಂದು ವಿಜಯವಾಣಿಯಲ್ಲಿ ವರದಿ ಪ್ರಕಟವಾಗಿತ್ತು.
ಸ್ಥಳಕ್ಕೆ ಭೇಟಿ ನೀಡಿದ ಬೇಲೂರು ಶಾಸಕ ಎಚ್.ಕೆ.ಸುರೇಶ್, ಗ್ರಾಪಂ ಸದಸ್ಯರು ಹಾಗೂ ಸ್ಥಳೀಯರಿಂದ ವಿವರ ಪಡೆದರು. ಸೆಸ್ಕ್ ಅಧಿಕಾರಗಳೊಂದಿಗೆ ಮಾತನಾಡಿ, ಗ್ರಾಪಂ ಕಚೇರಿಗೆ ವಿದ್ಯುತ್ ಸಂಪರ್ಕ ಒದಗಿಸಬೇಕು. ಇಲ್ಲದಿದ್ದಲ್ಲಿ ಕ್ರಮಕ್ಕೆ ಶಿಫಾರಸ್ಸು ಮಾಡುವುದು ಅನಿವಾರ್ಯ ಎಂದು ಎಚ್ಚರಿಸಿದರು. ಸೆಸ್ಕ್ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದರಿಂದ ಪಂಚಾಯಿತಿ ಕೆಲಸ ಕಾರ್ಯಗಳು ಸುಗಮವಾಗಿ ಸಾಗಿದೆ.