ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಇಂದು, ನಾಳೆ

Published on

ಮದ್ದೂರು: ಬೆಸಗರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.17 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಸಗರಹಳ್ಳಿ, ಕೋಣಸಾಲೆ, ಮರಳಿಗ, ಮಾರಸಿಂಗನಹಳ್ಳಿ, ಹೊಸಕೆರೆ, ಬೆಳತೂರು ಹಾಗೂ ಚಾಪುರದೊಡ್ಡಿ ಗ್ರಾಮಗಳು.

ಡಿ.18 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಕೊಪ್ಪ, ಹೊಸಗಾವಿ, ಕೌಡ್ಲೆ, ಬೆಕ್ಕಳಲೆ, ನಂಬಿನಾಯಕನಹಳ್ಳಿ, ಬಿದರಕೋಟೆ, ಗೂಳೂರು ಮತ್ತು ಆಬಲವಾಡಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net