ವಿಐಎಸ್‌ಎಲ್ ಕಾರ್ಖಾನೆಗೆ ಶಕ್ತಿ ತುಂಬಿ

10bdvt2
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭದ್ರಾವತಿ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ನಿಯೋಗವು ಸೈಲ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿತು. ಬಿ.ಜೆ.ರಾಮಲಿಂಗಯ್ಯ, ಅಡವೀಶಯ್ಯ ಇತರರಿದ್ದರು.
Published on

ಭದ್ರಾವತಿ: ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್) ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಪದಾಧಿಕಾರಿಗಳು ಶುಕ್ರವಾರ ಕೇಂದ್ರ ಉಕ್ಕು ಪ್ರಾಧಿಕಾರದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ, ಕಾರ್ಖಾನೆ ಅಭಿವೃದ್ಧಿ ಜತೆಗೆ ನಿವೃತ್ತ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು.

ವಿಐಎಸ್‌ಎಲ್ ಮುಚ್ಚುವ ಆದೇಶ ಹಿಂಪಡೆದು ಕಾರ್ಖಾನೆಗೆ ಅಗತ್ಯ ಬಂಡವಾಳ ತೊಡಗಿಸಬೇಕು. ಕಾರ್ಖಾನೆ ವಸತಿ ಗೃಹಗಳನ್ನು ಪುನಃ ದೀರ್ಘಾವಧಿ ಬಾಡಿಗೆ ಆಧಾರದಲ್ಲಿ ನೀಡಬೇಕು. 1989ರಿಂದ 1998ರ ನಡುವೆ ನಿವೃತ್ತಿಯಾದ ಕಾರ್ಮಿಕರಿಗೂ ವೈದ್ಯಕೀಯ ಭತ್ಯೆ ಜಾರಿಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜೆ.ರಾಮಲಿಂಗಯ್ಯ ನೇತೃತ್ವದ ನಿಯೋಗವು ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೆಂದು ಪ್ರಕಾಶ್, ನಿರ್ದೇಶಕರಾದ ಭೂಪೇಂದ್ರ, ಕೆ.ಕೆ.ಸಿಂಗ್ ಅವರಿಗೆ ಮನವಿ ಸಲ್ಲಿಸಿತು.
ಮನವಿ ಸ್ವೀಕರಿಸಿರುವ ಉನ್ನತ ಮಟ್ಟದ ಅಧಿಕಾರಿಗಳು, ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಕಾರ್ಮಿಕ ಮುಖಂಡ ಅಡವೀಶಯ್ಯ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net