ಪಿಪಿಸಿಯಲ್ಲಿ ರಾಷ್ಟ್ರಿಯ ಗ್ರಂಥಪಾಲಕರ ದಿನಾಚರಣೆ

udp-17-ppc
Published on

ಉಡುಪಿ: ಗ್ರಂಥಾಲಯದಲ್ಲಿ ಒದಗಿಸಲಾದ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಪೂರ್ಣಪ್ರಜ್ಞ ಇನ್​ಸ್ಟಿಟ್ಯೂಟ್​ ಆಫ್​ ಮ್ಯಾನೇಜ್​ಮೆಂಟ್​ ನಿರ್ದೇಶಕ ಡಾ. ಭರತ್​ ವಿ. ಹೇಳಿದರು.

ಪೂರ್ಣಪ್ರಜ್ಞ ಇನ್​ಸ್ಟಿಟ್ಯೂಟ್​ ಆಫ್​ ಮ್ಯಾನೇಜ್​ಮೆಂಟ್​ನಲ್ಲಿ ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್​.ಆರ್​.ರಂಗನಾಥನ್​ ಅವರ 131 ನೇ ಜನ್ಮದಿನದ ಅಂಗವಾಗಿ ನಡೆದ ರಾಷ್ಟ್ರಿಯ ಗ್ರಂಥಪಾಲಕರ ದಿನಾಚರಣೆಯಲ್ಲಿ ಮಾತನಾಡಿದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆ ಮುಖ್ಯ ಗ್ರಂಥಾಲಯ ಅಧಿಕಾರಿ ನಳಿನಿ ಜಿ.ಐ. ಮಾತನಾಡಿದರು. ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಪಾಲಕಿ ರಂಜಿತ ಸಿ. ಪೂರ್ಣಪ್ರಜ್ಞ ಸಂಶೋಧನಾ ಮತ್ತು ಅಭಿವೃದ್ಧಿಕೇಂದ್ರದ ನಿರ್ದೇಶಕ ಡಾ. ಕೃಷ್ಣ ಕೊತಾಯ ಭಾಗವಹಿಸಿದ್ದರು. ಸಂಸ್ಥೆಯ ಗ್ರಂಥಪಾಲ ಪುರುಷೋತ್ತಮ್​ ಸ್ವಾಗತಿಸಿದರು. ಪ್ರಥಮ ಎಂಬಿಎ ವಿದ್ಯಾರ್ಥಿನಿ ಪ್ರೀತಿ ನಾಯಕ್​ ವಂದಿಸಿ, ನವ್ಯ ಪ್ರಭು ಕಾರ್ಯಕ್ರಮ ನಿರ್ವಹಿಸಿದರು. ಗ್ರಂಥಾಲಯ ಸಮಿತಿಯ ಸಂಯೋಜಕಿ ಸುಜಾತ ಜಿ.ಎಲ್​ ಕಾರ್ಯಕ್ರಮ ಆಯೋಜಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net