

ಉಡುಪಿ: ಪೂರ್ಣಪ್ರಜ್ಞ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಭೌತಶಾಸ್ತ್ರ ವಿಭಾಗದ ಡಾ. ರಾಮು ಎಲ್. ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಶ್ರೀ ಅದಮಾರು ಮಠದ ಶಿಕ್ಷಣ ಮಂಡಳಿ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರ ರ್ನಿಣಯದಂತೆ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಜಿ. ಎಸ್. ಚಂದ್ರಶೇಖರ್, ಖಜಾಂಚಿ ಸಿ.ಎ. ಪ್ರಶಾಂತ್ಹೊಳ್ಳ, ಗೌರವ ಆಡಳಿತಾಧಿಕಾರಿ ಡಾ. ಎ.ಪಿ. ಭಟ್, ನಿವೃತ್ತ ಪ್ರಾಂಶುಪಾಲ ಡಾ. ರಾಘವೇಂದ್ರ ಎ, ಕುವೆಂಪು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಹಾಗೂ ಆಡಳಿತ ಮಂಡಳಿಯ ಸದಸ್ಯ ಪ್ರೊ. ಬಿ. ಎಸ್. ಶೇರಿಗಾರ್, ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ಮಾಜಿ ನಿರ್ದೇಶಕ ಪ್ರೊ. ಎಂ. ಆರ್. ಹೆಗಡೆ ಸಮ್ಮುಖದಲ್ಲಿ ಡಾ. ರಾಮು ಎಲ್. ಇವರಿಗೆ ಕಾಲೇಜಿನ ಅಧಿಕಾರವನ್ನು ಹಸ್ತಾಂತರಿಸಲಾಯಿತು.
ಡಾ. ರಾಮು ಎಲ್. ಪೂರ್ಣಪ್ರಜ್ಞ ಕಾಲೇಜಿಗೆ ಜುಲೈ 2021ರಲ್ಲಿ ಭೌತಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇರಿದ್ದು, ಸುಮಾರು 15 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದಾರೆ. ಕೆಜಿಎರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂ.ಇ.ಎಸ್. ಪದವಿ ಕಾಲೇಜು ಮತ್ತು ಎಂ.ಇ.ಎಸ್. ಪದವಿಪೂರ್ವ ಕಾಲೇಜಿನಲ್ಲಿ ಅವರು 11 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ನ್ಯೂಕ್ಲಿಯರ್ ಮ್ಯಾಗ್ನೆಟಿಕ್ ರೆಸೋನೆನ್ಸ್, ಥಿನ್ ಫಿಲ್ಮ್್ತ್ರ್ಸ ಮತ್ತು ಬಯೋ-ಫಿಸಿಕ್ಸ್ನ ಡೊಮೇನ್ಗಳಲ್ಲಿನ ಪ್ರತಿಷ್ಠಿತ ರ್ಜನಲ್ಗಳಲ್ಲಿ 20ಕ್ಕೂ ಹೆಚ್ಚು ಸಂಶೋಧನಾ ಲೇಖನ ಹಅಗೂ ಭೌತಶಾಸ್ತ್ರದಲ್ಲಿ 5 ಪುಸ್ತಕ ಪ್ರಕಟಿಸಿದ್ದಾರೆ. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನಲ್ಲಿ ಸಂಶೋಧನಾ ಕಾರ್ಯವನ್ನು ನಿರ್ವಹಿಸಿ 2009ರಲ್ಲಿ ಪಿ.ಎಚ್.ಡಿ. ಪದವಿಯನ್ನು ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಪಡೆದ್ದಾರೆ.