

ಉಡುಪಿ: ಪೂರ್ಣಪ್ರಜ್ಞ ಕಾಲೇಜಿನಲ್ಲಿ ಮೇ 17 ಹಾಗೂ 18 ರಂದು ರಾಜ್ಯಮಟ್ಟದ "ಪ್ರಜ್ಞಾ ಫೆಸ್ಟ್" ಆಯೋಜಿಸಲಾಗಿದೆ.
ಮೇ 17ರಂದು ಬೆಳಗ್ಗೆ 9:30ಕ್ಕೆ ಕಾಲೇಜಿನ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪೂರ್ಣಪ್ರಜ್ಞ ಸಮೂಹ ಸಂಸ್ಥೆಯ ನಿರ್ದೇಶಕ ಡಾ. ಶ್ರೀರಮಣ ಐತಾಳ್ ಮುಖ್ಯ ಅತಿಥಿಯಾಗಿರುವರು. ಕಾಲೇಜಿನ ಮುಖ್ಯ ಕಾರ್ಯದರ್ಶಿ ಡಾ.ಜಿ.ಎಸ್.ಚಂದ್ರಶೇಖರ್ ಉಪಸ್ಥಿತರಿರುತ್ತಾರೆ. ರಾಜ್ಯದ ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು ಆಗಮಿಸಲಿದ್ದಾರೆ.