ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Students
Published on

2023_24 ನೇ ಸಾಲಿನ ಕೇಂದ್ರ ಪುರಸ್ಕೃತ ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನವನ್ನು ಪಡೆಯಲು ರಾಜ್ಯದ ಟಾಪ್ ಸ್ಕೂಲ್ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗಗಳು ಮತ್ತು ಡಿ-ನೋಟಿಫೈಡ್, ಅಲೆಮಾರಿ ಮತ್ತು ಅರೆ ಅಲೆಮಾರಿ ಬುಡಕಟ್ಟು ವರ್ಗಗಳಿಗೆ ಸೇರಿರಬೇಕು, ಪೋಷಕರ ವಾರ್ಷಿಕ ಆದಾಯವು 2.50 ಲಕ್ಷದೊಳಗಿರಬೇಕು.9 ನೇ ಮತ್ತು 11 ನೇ ತರಗತಿಯಲ್ಲಿ ಉನ್ನತ ದರ್ಜೆಯ ಶಾಲೆಯಲ್ಲಿ ಓದುತ್ತಿರಬೇಕು, ಹಾಗೂ 9 ಮತ್ತು 10 ನೇ ತರಗತಿಗೆ ರೂ.75 ಸಾವಿರ ಮತ್ತು 11 ಮತ್ತು 12 ನೇ ತರಗತಿಗೆ ರೂ 1 ಲಕ್ಷ 25 ಸಾವಿರ ರೂ.ಗಳ ಶಾಲಾ ಬೋಧನಾ ಮತ್ತು ಹಾಸ್ಟೆಲ್ ಶುಲ್ಕವನ್ನು ಒಳಗೊಂಡಿರುತ್ತದೆ.

 ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಯನ್ನು https://yet.nta.ac.in  ಮತ್ತು https://socialjustice.gov.in/schmes ವೆಬ್‌ಸೈಟ್‌ನಲ್ಲಿ ಪಡೆಯಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net