ಗೋ ಹತ್ಯೆ ನಿಷೇಧ ಕಾಯ್ದೆ ಪ್ರಕರಣಗಳ ಇತ್ಯರ್ಥಕ್ಕೆ ವಿಶೇಷ ಕೋರ್ಟ್

prabhu
Published on

ಉಡುಪಿ: ಗೋ ಹತ್ಯೆ ನಿಷೇಧ ಕಾಯ್ದೆ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಈ ಸಂಬಂಧ ಪ್ರಕರಣದ ಶೀಘ್ರ ಇತ್ಯರ್ಥಕ್ಕೆ ವಿಶೇಷ ಕೋರ್ಟ್ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.

ಉಡುಪಿಯಲ್ಲಿ ಇಲಾಖೆ ಪ್ರಗತಿಪರಿಶೀಲನೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಗೋ ಸಂರಕ್ಷಣೆಗಾಗಿ ಸರ್ಕಾರ ಕಟ್ಟುನಿಟ್ಟಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದ್ದು, ಬೀಡಾಡಿ ಜಾನುವಾರುಗಳ ಪಾಲನೆಗಾಗಿ ರಾಜ್ಯಾದ್ಯಂತ ತಾಲೂಕು ಮಟ್ಟದಲ್ಲಿ ಸರ್ಕಾರಿ ಗೋಶಾಲೆಗಳನ್ನು ತೆರೆಯುವ ಚಿಂತನೆ ಸರ್ಕಾರಕ್ಕಿದೆ. ಈ ಬಗ್ಗೆ ಮುಂದಿನ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಗೋಸೇವಾ ಆಯೋಗ ರಚಿಸಲಾಗುತ್ತದೆ. ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧಿಸಿ ಜನತೆ ದೂರು ನೀಡಲು ಬೆಂಗಳೂರಿನಲ್ಲಿ ವಾರ್‌ರೂಂ ಸಹ ರಚನೆ ಮಾಡಲಾಗುತ್ತದೆ ಎಂದರು. ಉಡುಪಿ ಸೇರಿದಂತೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗೆ 25 ಪಶು ಸಂಜೀವಿನಿ (ಪಶು ಆಸ್ಪತ್ರೆ ಆಂಬುಲೆನ್ಸ್) ಮಂಜೂರಾಗಿದ್ದು, ಶೀಘ್ರ ನೀಡಲಾಗುವುದು. ಬೈಲೂರಿನ ನಿರ್ಮಾಣಗೊಂಡ ಸುಸಜ್ಜಿತ ಪಾಲಿಕ್ಲಿನಿಕ್ ಒಂದು ತಿಂಗಳೊಳಗೆ ಉದ್ಘಾಟನೆ ನೆರವೇರಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net