ಕೆಆರ್‌ಎಸ್‌ನಿಂದ ಪ್ರಭು ನಾಮಪತ್ರ ಸಲ್ಲಿಕೆ ನಾಳೆ

s.k. Prabhu
ಎಸ್.ಕೆ.ಪ್ರಭು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಎಸ್.ಮಂಜುನಾಥ್, ಬಿ.ಎಸ್.ದಯಾನಂದ್ ಮುಂತಾದವರಿದ್ದರು.
Published on

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲೂ ಕೆಆರ್‌ಎಸ್ (ಕರ್ನಾಟಕ ರಾಷ್ಟ್ರ ಸಮಿತಿ) ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಪಕ್ಷದ ಜಿಲ್ಲಾಧ್ಯಕ್ಷ ಎಸ್.ಕೆ.ಪ್ರಭು ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ, ಶಿವಮೊಗ್ಗ ಉಸ್ತುವಾರಿ ಎಸ್.ಮಂಜುನಾಥ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಕೆ.ಪ್ರಭು ಏ.12ರ ಮಧ್ಯಾಹ್ನ 12ಕ್ಕೆ ರವೀಂದ್ರ ನಗರ ಗಣಪತಿ ದೇವಾಲಯದಿಂದ ಕಾಲ್ನಡಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಪಕ್ಷದ ಅಭಿಮಾನಿಗಳು ಹಾಗೂ ಬೆಂಬಲಿಗರು ಇವರಿಗೆ ಸಾಥ್ ನೀಡಲಿದ್ದಾರೆ ಎಂದರು.
ನಮ್ಮ ಪಕ್ಷ ಭ್ರಷ್ಟಚಾರದ ವಿರುದ್ಧ ನಿರಂತರ ಹೋರಾಟ ಮಾಡುವ ಜತಗೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂಧಿಸುತ್ತಿದೆ. ಇವೆಲ್ಲವನ್ನೂ ಗಮನಿಸಿ ಜನರು ನಮ್ಮ ಅಭ್ಯರ್ಥಿಯನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ಅಭ್ಯರ್ಥಿ ಎಸ್.ಕೆ.ಪ್ರಭು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ದಯಾನಂದ್, ಪ್ರಮುಖರಾದ ಸುಧೀರ್, ನಿರಂಜನ್, ಟಿ.ಆರ್.ಕೃಷ್ಣಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net