ಪುರೋಹಿತರು ಉನ್ನತ ಶಿಕ್ಷಣದಿಂದ ವಂಚಿತ

Untitled design(7)
ಹಗರಿಬೊಮ್ಮನಹಳ್ಳಿ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಶ್ರೀವೀರಭದ್ರೇಶ್ವರ ಯುಗಮಾನೋತ್ಸವ ಮತ್ತು ವೀರಶೈವ ಜಂಗಮ ಅರ್ಚಕ ಪುರೋಹಿತರ ಸಮ್ಮೇಳನ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಶಾಸಕ ಕೆ.ನೇಮಿರಾಜ್‌ನಾಯ್ಕ, ಸಂಡೂರು ವಿರಕ್ತಮಠದ ಪ್ರಭು ಸ್ವಾಮೀಜಿ, ಡಾ.ಮಹೇಶ್ವರ ಸ್ವಾಮೀಜಿ, ಶಂಕರ ಸ್ವಾಮೀಜಿ, ಹಾಲಸಿದ್ದೇಶ್ವರ ಸ್ವಾಮೀಜಿ ಇತರರಿದ್ದರು.
Published on

ಹಗರಿಬೊಮ್ಮನಹಳ್ಳಿ: ಉತ್ತಮ ಸಮಾಜ ನಿರ್ಮಾಣಕ್ಕಾಗಿ ಧಾರ್ಮಿಕ ಆಚರಣೆಗಳು ನಡೆಯುತ್ತವೆ ಎಂದು ಸಂಡೂರು ವಿರಕ್ತ ಮಠದ ಪ್ರಭುಸ್ವಾಮೀಜಿ ಅಭಿಪ್ರಾಯಪಟ್ಟರು.

ಪಟ್ಟಣದ ಬಸವೇಶ್ವರ ಬಜಾರದಲ್ಲಿ ವೀರಶೈವ ಕಲ್ಯಾಣ ಮಂಟಪದಲ್ಲಿ ವೀರಶೈವ ಸಮಾಜ ಸಹಕಾರದೊಂದಿಗೆ ವೀರಶೈವ ಜಂಗಮ ಪುರೋಹಿತ ಸಂಘದ ತಾಲೂಕು ಸಂಘಟನೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಶ್ರೀವೀರಭದ್ರೇಶ್ವರ ಯುಗಮಾನೋತ್ಸವ ಮತ್ತು ವೀರಶೈವ ಜಂಗಮ ಅರ್ಚಕ ಪುರೋಹಿತರ ಸಮ್ಮೇಳನ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.

ಸಮಾಜದಲ್ಲಿ ಪುರೋಹಿತರನ್ನು ಎಲ್ಲ ಕಾರ್ಯಕ್ರಮಗಳಿಗೆ ಮೊದಲು ಕರೆಯಲಾಗುತ್ತದೆ. ಅಲ್ಲಿಯೇ ದಿನದ ಸಮಯ ಮುಗಿಯುವುದರಿಂದ ಅವರಿಗೆ ಭವಿಷ್ಯದಲ್ಲಿ ಉನ್ನತ ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಜತೆಗೆ ಕುಟುಂಬ ನಿರ್ವಹಣೆಯಲ್ಲಿ ಆರ್ಥಿಕವಾಗಿ ಹಿನ್ನೆಡೆ ಅನುಭವಿಸುತ್ತಿದ್ದಾರೆ. ಆದರೂ ಸಮಾಜದಲ್ಲಿ ಯುವ ಸಮೂಹಕ್ಕೆ ಸಂಸ್ಕಾರ, ಸಂಸ್ಕೃತಿ ನೀಡುವಂತ ಶಕ್ತಿ ಅವರಲ್ಲಿ ಅಡಗಿರುತ್ತೆ ಎಂದರು.

ಶಾಸಕ ನೇಮಿರಾಜ್‌ನಾಯ್ಕ ಉದ್ಘಾಟಿಸಿ ಮಾತನಾಡಿ, ಅರ್ಚಕರಿಗೂ ಮತ್ತು ಪುರೋಹಿತರಿಗೂ ಸರ್ಕಾರದ ಸೌಲಭ್ಯಗಳು ದೊರೆಯಬೇಕು. ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವೀರಶೈವ ಜಂಗಮ ಪುರೋಹಿತ ಸಂಘದ ತಾಲೂಕು ಅಧ್ಯಕ್ಷ ಸುಭಾಷ್ ಚಂದ್ರಶಾಸ್ತ್ರಿ ಪ್ರಾಸ್ತಾವಿಕವಾಗಿ ಮಾತನಾಡಿ, ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೆ ಮಾಡುವ ಸೇವೆ ಅರ್ಚಕರ ಸೇವೆಯಾಗಿದೆ. ಇದ್ದುದ್ದರಲ್ಲೇ ಸಂತೃಪ್ತಿ ಪಡುವ ಸಮುದಾಯ ನಮ್ಮದಾಗಿದೆ. ಸರ್ಕಾರದ ಸೌಲಭ್ಯಗಳೊಂದಿಗೆ ವೇತನ ನಿಗದಿಯಾಗಬೇಕು ಎಂದು ಒತ್ತಾಯಿಸಿದರು.

ಮರಿಯಮ್ಮನಹಳ್ಳಿಯ ಮಲ್ಲಿಕಾರ್ಜುನ ಶಿವಾಚಾರ್ಯ, ನಂದಿಪುರದ ಡಾ.ಮಹೇಶ್ವರ ಸ್ವಾಮೀಜಿ, ಹನಸಿ ಮಠದ ಶಂಕರ ಸ್ವಾಮೀಜಿ, ಹಾಲಸ್ವಾಮಿ ಮಠದ ಹಾಲಸಿದ್ದೇಶ್ವರ ಸ್ವಾಮೀಜಿ, ಸಂಘದ ವಿಜಯನಗರ ಜಿಲ್ಲಾಧ್ಯಕ್ಷ ಎಚ್.ಎಂ.ಗಂಗಾಧರ ಶಾಸ್ತ್ರಿ, ಜ್ಯೋತಿಷ್ಯರತ್ನ ಪುರಸ್ಕೃತ ನಂದಿಬಂಡಿ ವೀರಣ್ಣ, ಜೆಡಿಎಸ್ ತಾಲೂಕು ಅಧ್ಯಕ್ಷ ವೈ.ಮಲ್ಲಿಕಾರ್ಜುನ, ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಕೊಟ್ರೇಶ ಶೆಟ್ಟರ್, ಸಂಘದ ಉಪಾಧ್ಯಕ್ಷ ಎಚ್.ಎಂ.ಕೊಟ್ರಯ್ಯ, ಮುಖಂಡರಾದ ಎಂ.ಪಿ.ಕೊಟ್ರೇಶ್, ಬದಾಮಿ ಮೃತ್ಯುಂಜಯ, ಜೆ.ಎಂ.ಜಗದೀಶ, ಪಟ್ಟೇದ್ ಮಲ್ಲಿಕಾರ್ಜುನ, ಮಲ್ಲಯ್ಯ, ಎಂ.ಪಿ.ಸಿದ್ದೇಶ್ವರಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net