ಪ್ರಧಾನ ಮಂತ್ರಿ ಆವಾಸ್ ಯೋಜನೆ, ಸಮೀಕ್ಷಾ ಅವಧಿ ವಿಸ್ತರಿಸಿ-ಕಾರ್ಯೋನ್ಮುಖರಾಗಿ, ಸಿಇಒಗಳಿಗೆ ವಿಪ ಸದಸ್ಯ ಸುನೀಲಗೌಡ ಪಾಟೀಲ ಸೂಚನೆ

MLC SUNILGOUDA PATIL
MLC SUNILGOUDA PATIL
Published on

ವಿಜಯಪುರ: ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ಯಡಿ ಅರ್ಹ ವಸತಿ ರಹಿತರ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸುವ ಅವಧಿಯನ್ನು ಏ.30ರ ವರೆಗೆ ವಿಸ್ತರಿಸಲಾಗಿದ್ದು, ಈ ನಿಟ್ಟಿನಲ್ಲಿ ಕೂಡಲೇ ಕಾರ್ಯೋನ್ಮುಖರಾಗುವಂತೆ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ವಿಜಯಪುರ-ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ಯಡಿ ಅರ್ಹ ವಸತಿ ರಹಿತರ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸುವ ಅವಧಿ ಮಾ.31ರವರೆಗೆ ನಿಗದಿ ಪಡಿಸಲಾಗಿತ್ತು. ಆದರೆ, ಶೇ.100 ರಷ್ಟು ಅರ್ಹ ಫಲಾನುಭವಿಗಳ ಸಮೀಕ್ಷೆ ನಡೆಸಲು ರಾಜೀವ ಗಾಂಧಿ ವಸತಿ ನಿಗಮ ಸಮೀಕ್ಷೆ ಅವಧಿಯನ್ನು ಏ.30ರ ವರೆಗೆ ವಿಸ್ತರಿಸಿದೆ. ಹೀಗಾಗಿ ಜಿಪಂ, ತಾಪಂ ಅಧಿಕಾರಿಗಳು ಹಾಗೂ ಪಿಡಿಒಗಳು ಈ ಅವಧಿಯಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಿ ವಸತಿ ಮತ್ತು ನಿವೇಶನ ರಹಿತರಿಗೆ ಅನುಕೂಲ ಮಾಡಿ ಕೋಡಬೇಕು ಎಂದು ಶಾಸಕರು ಪತ್ರದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net