

ಕಡಬ: ಶ್ರೇಷ್ಠ ಗುರಿಯನ್ನು ಇಟ್ಟುಕೊಂಡಾಗ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ.ಆಧುನಿಕ ತಂತ್ರಜ್ಞಾನದ ಆಕರ್ಷಣೆಯಿಂದ ಮಕ್ಕಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿದೆ ಎಂದು ಚಾರ್ವಾಕ ದೈಪಿಲ ಶ್ರೀ ಕ್ಷೇತ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಆರ್.ಗೌಡ ಅರುವಗುತ್ತು ಹೇಳಿದರು.
ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಶಾಲಾ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ವಾತನಾಡಿದರು.
ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಅಧ್ಯಕ್ಷತೆ ವಹಿಸಿದ್ದರು. ಸವಣೂರು ಗ್ರಾಮ ಪಂಚಾಯಿತಿ ಸದಸ್ಯ ಗಿರಿಶಂಕರ ಸುಲಾಯ, ಪ್ರಗತಿ ವಿದ್ಯಾಸಂಸ್ಥೆಯ ಆಡಳಿತ ಸಮಿತಿ ಸದಸ್ಯ ಉದಯ ರೈ ಮಾದೋಡಿ, ಕಾಣಿಯೂರು ಕ್ಲಸ್ಟರ್ ಸಿ.ಆರ್.ಪಿ. ಯಶೋದಾ, ಸಂಸ್ಥೆಯ ಶಿಕ್ಷಕ ರಕ್ಷಕ ಸಂದ ಅಧ್ಯಕ್ಷ ದಿವೀಶ್ ಮುರುಳ್ಯ ಸಂಸ್ಥೆಯ ನಿವೃತ್ತ ಮುಖ್ಯಶಿಕ್ಷಕಿ ಸರಸ್ವತಿ, ಹಿರಿಯ ವಿದ್ಯಾರ್ಥಿ ಸಂದ ಅಧ್ಯಕ್ಷ, ಪುತ್ತೂರು ವಿವೇಕಾನಂದ ಕಾಲೇಜಿನ ಉಪನ್ಯಾಸಕ ದೀಕ್ಷಿತ್ ಬಂಡಾಜೆ , ಶಾಲಾ ಆಡಳಿತ ಸಮಿತಿ ಉಪಾಧ್ಯಕ್ಷ ವಿಶ್ವನಾಥ ರೈ ಮಾದೋಡಿ, ಸದಸ್ಯ ನಾಗೇಶ್ ರೈ ವಾಳ, ಟ್ರಸ್ಟಿಗಳಾದ ವಂದಾ ಜೆ.ರೈ, ದೇವಿಕಿರಣ್ ರೈ ವಾದೋಡಿ, ಹರಿಚರಣ್ ರೈ ಮಾದೋಡಿ, ಶಾಲಾ ಸಹ ಆಡಳಿತಾಧಿಕಾರಿ ಹೇಮಾ ನಾಗೇಶ್ ರೈ ಮಾಳ, ಶಾಲಾ ವಿದ್ಯಾರ್ಥಿ ನಾಯಕ ಪ್ರಸ್ತುತ್ ಕೆ. ಉಪಸ್ಥಿತರಿದ್ದರು.
ಕನ್ನಡ ಮಾಧ್ಯಮದ ಮುಖ್ಯಶಿಕ್ಷಕ ವಿನಯ ವಿ.ಶೆಟ್ಟಿ ಸನ್ಮಾನಿತರ ವಿವರ ವಾಚಿಸಿದರು. ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಸ್ವಾಗತಿಸಿದರು. ಆಂಗ್ಲ ಮಾಧ್ಯಮದ ಮುಖ್ಯಶಿಕ್ಷಕ ನಾರಾಯಣ ಭಟ್ ವಂದಿಸಿದರು. ಸಹಾಯಕ ಮುಖ್ಯಗುರು ಅನಿತಾ ಜೆ.ರೈ ನಿರೂಪಿಸಿದರು.
ಸಾಧಕರಿಗೆ ಅಭಿನಂದನೆ
ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಡಳಿತ ಸಮಿತಿ ಸದಸ್ಯ ಚಂದ್ರಹಾಸ ರೈ ಅಗಲ್ಪಾಡಿ ಮತ್ತು ಗಿರೀಶ್ ಆರ್ನೂಜಿ ಅವರು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಗೆ ಕೊಡುಗೆಯಾಗಿ ನೀಡಿದ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಲಾಯಿತು. ಕರ್ನಾಟಕ ಸಹಕಾರ ಗ್ರಾಹಕರ ಮಹಾಮಂಡಲದ ನಿರ್ದೇಶಕ ಉದಯ ರೈ ವಾದೋಡಿ ಉದ್ಘಾಟಿಸಿದರು.ಕರ್ನಾಟಕ ಸಹಕಾರ ಗ್ರಾಹಕರ ಮಹಾಮಂಡಲದ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಡಳಿತ ಸಮಿತಿ ಸದಸ್ಯರು, ಸವಣೂರು ಪ್ರಾಥಮಿಕ ಕಷಿ ಪತ್ತಿನ ಸಹಕಾರ ಸಂದ ನಿರ್ದೇಶಕರೂ ಆಗಿರುವ ಉದಯ ರೈ ವಾದೋಡಿ ದಂಪತಿಯನ್ನು ಸನ್ಮಾನಿಸಲಾಯಿತು.