ಪ್ರಜ್ಞಾ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನಿಂದ 'ಪ್ರಜ್ಞಾ ರಂಗೋತ್ಸವ'

Published on

ಮೈಸೂರು: ಪ್ರಜ್ಞಾ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನಿಂದ ಆ.24 ಮತ್ತು 25ರಂದು ನಗರದಲ್ಲಿ ಪ್ರಜ್ಞಾ ರಂಗೋತ್ಸವ ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಸೋಸಲೆ ಸಿದ್ದರಾಜು ತಿಳಿಸಿದರು.
ಕಲಾಮಂದಿರದಲ್ಲಿ ಆ.24ರಂದು ಸಂಜೆ 6 ಗಂಟೆಗೆ ಲೇಖಕ ಕೊಟಗಾನಹಳ್ಳಿ ರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಿರಿಯ ರಂಗಕರ್ಮಿ ಬಸವಲಿಂಗಯ್ಯ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಕೆ ಸಹಾಯಕ ನಿರ್ದೇಶಕ ಡಾ.ಸುದರ್ಶನ್, ಅರಮನೆ ಮಂಡಳಿ ಸಹಾಯಕ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಸಾಹಿತಿ ಬನ್ನೂರು ರಾಜು, ನಿವೃತ್ತ ಪ್ರಾಂಶುಪಾಲ ಪ್ರೊ.ಸಿ.ರಾಮಸ್ವಾಮಿ ಇತರರು ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಆ.25ರಂದು ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ನಟ ಚೇತನ್ ಸಮಾರೋಪ ಭಾಷಣ ಮಾಡುವರು. ಪ್ರಜ್ಞಾ ಟ್ರಸ್ಟ್‌ನ ಗೌರವಾಧ್ಯಕ್ಷ ಡಾ.ಪಿ. ಮಾದೇಶ್ ಅಧ್ಯಕ್ಷತೆ ವಹಿಸುವರು. ಕಲಾವಿದ ಮೈಮ್ ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಗಾಂಧಿಭವನದ ನಿವೃತ್ತ ನಿರ್ದೇಶಕ ಡಾ.ಎಸ್.ಶಿವರಾಜಪ್ಪ, ನಿವೃತ್ತ ಪ್ರಾಂಶುಪಾಲ ಡಾ.ಎಚ್.ಎಂ.ಕುಮಾರಸ್ವಾಮಿ ಅತಿಥಿಗಳಾಗಿ ಭಾಗವಹಿಸುವರು. ಈ ವೇಳೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಎರಡೂ ದಿನ ಜಶನಪದ ನೃತ್ಯ, ಡೊಳ್ಳು ಕುಣಿತ, ಶರೀಫ ನಾಟಕ ಪ್ರದರ್ಶನ, ಜಾನಪದ ಸಂಗೀತ, ಮಂಟೇಸ್ವಾಮಿ ಕಥಾ ಪ್ರಸಂಗ ಮೊದಲಾದ ಕಾರ್ಯಕ್ರಮ ನಡೆಯಲಿದ್ದು, ಎಲ್ಲರಿಗೂ ಉಚಿತ ಪ್ರವೇಶವಿದೆ ಎಂದು ತಿಳಿಸಿದರು.
ಟ್ರಸ್ಟ್‌ನ ಕೆ.ಶಿವರಾಜು, ಕೆ.ಎಸ್.ಕುಮಾರಸ್ವಾಮಿ, ಡಾ.ಎಸ್.ಆರ್.ತಿರುಮಲೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net