ಖಾಸಗಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳಿಂದ ಗುಣಮಟ್ಟದ ಶಿಕ್ಷಣ ಒಕ್ಕೂಟದ ಪದಗ್ರಹಣದಲ್ಲಿ ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿಕೆ

mng-feb13-school
Published on

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿರುವ ಖಾಸಗಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳು ನೈತಿಕ ಜತೆಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದ್ದು, ಎಸ್ಸೆಸ್ಸೆಲ್ಸಿ ಫಲಿತಾಂಶದ ಸಾಧನೆ ಇದಕ್ಕೆ ಸಾಕ್ಷಿ ಎಂದು ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ನೂತನ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.


ನಗರದ ಖಾಸಗಿ ಹೋಟೆಲ್‌ನ ಸಭಾಂಗಣದಲ್ಲಿ ಮಂಗಳವಾರ ನಡೆದ ದ.ಕ. ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಆಂಗ್ಲ ಮಾಧ್ಯಮ ಶಾಲಾ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ನಿರ್ಮಿತಿ ಕೇಂದ್ರದ ಕಾರ್ಯ ನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟದ ಪ್ರಧಾನ ಸಲಹೆಗಾರ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ, ಉಪಾಧ್ಯಕ್ಷ ಭಾಸ್ಕರ ಆಚಾರ್ಯ, ಸದಸ್ಯ ಆಲ್ವಿನ್ ರಾಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.


ನೂತನ ಪದಾಧಿಕಾರಿಗಳು: ಗೌರವ ಅಧ್ಯಕ್ಷರಾಗಿ ಪುತ್ತೂರಿನ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು, ಅಧ್ಯಕ್ಷರಾಗಿ ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಉಪಾಧ್ಯಕ್ಷರಾಗಿ ಜೋಕಟ್ಟೆ ಅಂಜುಮಾನ್ ಆಂಗ್ಲ ಮಾಧ್ಯಮ ಶಾಲೆಯ ಪ್ರಧಾನ ಸಲಹೆಗಾರ ಮೂಸಬ್ಬ. ಪಿ. ಬ್ಯಾರಿ ಜೋಕಟ್ಟೆ, ಪುತ್ತೂರು ನರಿಮೊಗೇರು ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಭಾಸ್ಕರ ಆಚಾರ್ಯ, ಕಾಪು ಶ್ರೀ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಜಿನರಾಜ್ ಸಿ. ಸಾಲ್ಯಾನ್, ಪುತ್ತೂರು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಶೆಟ್ಟಿ ಸವಣೂರು, ಕೊಂಚಾಡಿ ಸ್ಪೂರ್ತಿ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಸಬಿತಾ ಎಸ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಕನ್ಯಾನ ಶ್ರೀ ಸರಸ್ವತಿ ವಿದ್ಯಾಲಯದ ಅಧ್ಯಕ್ಷ ಈಶ್ವರ ಪ್ರಸಾದ್ ಕನ್ಯಾನ, ಕೋಶಾಧಿಕಾರಿಯಾಗಿ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಜತೆ ಕಾರ್ಯದರ್ಶಿಯಾಗಿ ಮಲವೂರು ಬಜಪೆ ಪಾಪ್ಯುಲರ್ ಬಂಟ್ಸ್ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಗೋಪಿನಾಥ್ ಹೆಗ್ಡೆ ಆಯ್ಕೆಯಾದರು. ಇದರ ಜತೆಯಲ್ಲಿ 7 ಮಂದಿ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾದರು. ಉಳಿದಂತೆ ತಾಲೂಕು ಸಂಚಾಲಕರ ನೇಮಕ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net