ಎಲ್ಲರಿಗೂ ಸಮಾನತೆ, ಸಮಾನ ಅವಕಾಶ

cycle
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಎಲ್ಲರಿಗೂ ಸಮಾನತೆ, ಎಲ್ಲ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸ್ಮರಿಸುತ್ತ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆ.15ರಂದು ಪ್ರತಿವರ್ಷ ಆಚರಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ದೇವನಹಳ್ಳಿ ತಾಲೂಕು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಬೈಕ್ ಹಾಗೂ ಸೈಕಲ್ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಸ್ವಾತಂತ್ರ್ಯಪೂರ್ವದಲ್ಲಿ ಬ್ರಿಟಿಷರ ಆಡಳಿದಿಂದ ಭಾರತದಲ್ಲಿ ಮೂಲಸೌಕರ್ಯ ಕೊರತೆ ಹಾಸುಹೊದ್ದಿತ್ತು.ಸ್ವಾತಂತ್ರ್ಯನಂತರದ ಭಾರತ ಸಾಮಾಜಿಕ, ಅರ್ಥಿಕ, ರಾಜಕೀಯ ಸೇರಿ ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಅಭಿವೃದ್ಧಿಶೀಲ ರಾಷ್ಟ್ರವಾಗಿದೆ. ಇದಕ್ಕೆ ನಮ್ಮ ಸುಭದ್ರ ಪ್ರಜಾಪ್ರಭುತ್ವ ಹಾಗೂ ಶ್ರೇಷ್ಠ ಸಂವಿಧಾನವೇ ಕಾರಣವಾಗಿದೆ. ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ನೀಡಿರುವ ಸಂವಿಧಾನವವನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಹೇಳಿದರು.

ವಿವಿಧ ಇಲಾಖೆಗಳ ಸಹಯೋಗ: ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಸಹಭಾಗಿತ್ವದಲ್ಲಿ ನನ್ನ ಮತ-ನನ್ನ ಹಕ್ಕು ಎನ್ನುವ ಧ್ಯೇಯ ವಾಕ್ಯದೊಂದಿಗೆ ಜಿಲ್ಲಾ ಮಟ್ಟದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಮುನಿಕೃಷ್ಣ ತಿಳಿಸಿದರು.

ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರ: ಭಾರತ ಬೃತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವದಡಿ ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ, ಪ್ರಜೆಗಳಿಂದ ರಚಿತವಾದ ಸರ್ಕಾರವೇ ಆಡಳಿತ ನಡೆಸಲಿದೆ. ಸಂವಿಧಾನ ರಚನೆ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಕೊಟ್ಟಿದ್ದಾರೆ. ಎಲ್ಲರಿಗೂ ಸಮಾನತೆ, ಎಲ್ಲ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ನೀಡಿದ ಅಂಬೇಡ್ಕರ್ ಅವರನ್ನು ಸ್ಮರಿಸುತ್ತ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತಿದೆ ಎಂದು ಜಿಪಂ ಮಾಜಿ ಸದಸ್ಯ ಮಂಜುನಾಥ್ ತಿಳಿಸಿದರು.

ಪುತ್ಥಳಿಗಳಿಗೆ ಮಾಲಾರ್ಪಣೆ:

ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಪುತ್ಥಳಿಗೆ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಗೌರವಪೂರ್ವಕ ಮಾಲಾರ್ಪಣೆ ಸಲ್ಲಿಸಿ ಜಾಥಾಗೆ ಚಾಲನೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು. ಕಾಲೇಜುಗಳ ವಿದ್ಯಾರ್ಥಿನಿಯರು, ಯುವಕರು ಸೇರಿ ಹಲವರು ಸೈಕಲ್ ಜಾಥಾದ ಮೂಲಕ ಪ್ರಜಾಪ್ರಭುತ್ವ ದಿನ ೋಷಣೆ ಕೂಗಿದರು. ವಿಕಲಚೇತನರು ಹಾಗೂ ಸ್ಥಳೀಯ ಮುಖಂಡರು ಬೈಕ್ ರ‌್ಯಾಲಿ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಮಹತ್ವ ಸಾರಿದರು.

--------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net