ಪ್ರಜ್ವಲ್ ಸಂಸದರಾಗಿದ್ದು ಕಾಂಗ್ರೆಸ್ ಬೆಂಬಲದಿಂದ

New ASHOK New 77
Published on

ಹುಬ್ಬಳ್ಳಿ : ಪ್ರಜ್ವಲ ರೇವಣ್ಣ ಸಂಸದರಾಗಿದ್ದು ಕಾಂಗ್ರೆಸ್-ಜೆಡಿಎಸ್ ಬೆಂಬಲದಿಂದ. ಹೀಗಾಗಿ, ಪ್ರಜ್ವಲ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಈಡಾದ ಸಂತ್ರಸ್ತರಿಗೆ ಕಾಂಗ್ರೆಸ್ ಉತ್ತರ ಕೊಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಒತ್ತಾಯಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರು ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿದ್ದರು. ಎಂತಹ ವ್ಯಕ್ತಿಯ ಪರ ಪ್ರಚಾರ ನಡೆಸುತ್ತಿದ್ದೇವೆ ಎಂಬ ಸಾಮಾನ್ಯ ಜ್ಞಾನವೂ ಕಾಂಗ್ರೆಸ್​ನವರಿಗೆ ಇರಲಿಲ್ಲವೇ ? ಎಂದು ಪ್ರಶ್ನಿಸಿದರು.

ಪೆನ್​ಡ್ರೖೆವ್ ಹಗರಣದ ತನಿಖೆಗೆ ಈಗಾಗಲೇ ಎಸ್​ಐಟಿ ರಚಿಸಲಾಗಿದೆ. ಪ್ರಾಮಾಣಿಕ ತನಿಖೆ ನಡೆದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net